ADVERTISEMENT

ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 9:25 IST
Last Updated 4 ಅಕ್ಟೋಬರ್ 2012, 9:25 IST

ಹಾಸನ: ಜಿಲ್ಲೆಯ ಹಾಲು ಉತ್ಪಾದಕರಿಗೆ ನೀಡಬೇಕಾಗಿರುವ ಪ್ರೋತ್ಸಾಹ ಧನವನ್ನು ಕೆ.ಎಂ.ಎಫ್ ಹಲವು ತಿಂಗಳಿಂದ ಬಾಕಿ ಇರಿಸಿಕೊಂಡಿದ್ದು, ಕೂಡಲೇ ಅದನ್ನು ಪಾವತಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಡೇರಿ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದರು.


ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಾಲು ಉತ್ಪಾದಕರಿಗೆ ತೊಂದರೆ ನೀಡುತ್ತ ಬಂದಿದೆ. ಬರಗಾಲದಿಂದ ಒಂದೆಡೆ ರೈತರು ಬೆಳೆ ನಷ್ಟ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಬರಬೇಕಾದ ಹಾಲಿನ ಹಣವೂ ಸಕಾಲದಲ್ಲಿ ಬಾರದೆ ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ನುಡಿದರು.

ಸರ್ಕಾರ ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್, ಯುವ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT