ಜಾವಗಲ್: ಪಟ್ಟಣದ ಪುಟಾಣಿ ರೂಪಾ ವಯಸ್ಸಿಗೆ ಮೀರಿದ ಪ್ರತಿಭೆ ಹೊಂದಿದ್ದಾಳೆ. ಇಲ್ಲಿಯ ಗುರುಕುಲ ಇಂಟರ್‌ನ್ಯಾಷನಲ್ ಸ್ಕೂಲ್‌ನ ವಿದ್ಯಾರ್ಥಿನಿ ಯಾದ ಈಕೆ ಚಿಕ್ಕ ವಯ್ಯಸ್ಸಿನಲ್ಲೇ ನೃತ್ಯ, ಚಿತ್ರಕಲೆ, ಹಾಡುಗಾರ್ತಿಯಾಗಿ ಅನೇಕ ಬಹುಮಾನಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿದ್ದಾಳೆ.
ಚಿಕ್ಕಮಗಳೂರು, ಹಾಸನ, ಬೆಂಗಳೂರುನಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿರುತ್ತಾಳೆ. ಗ್ರಾಮೀಣ ಭಾಗದ ವಿದ್ಯಾರ್ಥಿಯಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾಳೆ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಘು ಸಂಗೀತ, ಭರತನಾಟ್ಯದಲ್ಲೂ ಬಹುಮಾನ ಗಳಿಸಿದ್ದಾಳೆ.
ಈ ಬಾಲ ಪ್ರತಿಭೆಯನ್ನು ಅನೇಕ ಸಂಘ ಸಂಸ್ಥೆಗಳು ಸನ್ಮಾನಿಸಿವೆ. ಇಲ್ಲಿಯವರೆಗೆ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಗಳಿಂದ ಸುಮಾರು 25ಕ್ಕೂ ಹೆಚ್ಚು ಬಹುಮಾನ ಮತ್ತು ಪ್ರಶಸ್ತಿ ಪಡೆದು ಗ್ರಾಮಕ್ಕೆ ಕೀರ್ತಿ ತಂದಿರುತ್ತಾಳೆ. ಈಕೆ ಇನ್ನಷ್ಟು ಸಾಧನೆ ಮಾಡಲಿ ಎಂಬುದು ಊರಿನವರ ಬಯಕೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.