ADVERTISEMENT

ಮಾನವೀಯತೆ ಮೆರೆದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 8:51 IST
Last Updated 3 ಅಕ್ಟೋಬರ್ 2017, 8:51 IST
ಮಾನವೀಯತೆ ಮೆರೆದ ವಿದ್ಯಾರ್ಥಿಗಳು
ಮಾನವೀಯತೆ ಮೆರೆದ ವಿದ್ಯಾರ್ಥಿಗಳು   

ಅರಕಲಗೂಡು: ಅಂಗವಿಕಲ ಮಕ್ಕಗಳಿಗೆ ಧನ ಸಹಾಯ ನೀಡುವ ಮೂಲಕ ಪಟ್ಟಣದ ಬಿ.ಜಿ.ಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೋಮವಾರ ಗಾಂಧಿ ಜಯಂತಿಯನ್ನು ಭಿನ್ನ ರೀತಿಯಲ್ಲಿ ಆಚರಿಸಿದರು.ಮಾನವೀಯತೆ ಮೆರೆದರು.

ಕೆಇಬಿ ರಸ್ತೆಯ ರಾಧಾ ಎಂಬುವರ ಇಬ್ಬರು ಅಂಗವಿಕಲ ಹೆಣ್ಣುಮಕ್ಕಳಿಗೆ ₹ 25,000 ಧನ ಸಹಾಯ ನೀಡಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ್ ಹೊಡೆನೂರು ಮಾತನಾಡಿ, ‘ವಿದ್ಯಾರ್ಥಿಗಳು ತಾವೇ ವೈಯಕ್ತಿಕವಾಗಿ ಹಣ ಸಂಗ್ರಹಿಸಿ ಆ ಹಣವನ್ನು ಸಮಾಜದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡುವ ಮೂಲಕ ಕಳೆದ ಕೆಲವು ವರ್ಷಗಳಿಂದ ಗಾಂಧಿ ಜಯಂತಿ ಆಚರಿಸುತ್ತಿದ್ದಾರೆ. ಇದಕ್ಕೆ ಸಿಬ್ಬಂದಿಯೂ ಕೈ ಜೋಡಿಸುತ್ತಿದ್ದಾರೆ’ ಎಂದರು.

‘ಈ ಬಾರಿ ಈ ಬಾರಿ ಅಂಗವಿಕಲ ಮಕ್ಕಳ ಕುಟುಂಬಕ್ಕೆ ಸಹಾಯ ಹಸ್ತ ಚಾಚುವ ಮೂಲಕ ಗಾಂಧೀಜಿಯವರ ಆಶಯದಂತೆ ನೊಂದ ಮನಸುಗಳಿಗೆ ಸಾಂತ್ವನ ನೀಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ’ ಎಂದರು. ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.