ಹಾಸನ: ನಮ್ಮ ಜನಸಂಖ್ಯೆಯನ್ನು ಗುಣಾತ್ಮಕ ಮಾನವ ಸಂಪತ್ತನ್ನಾಗಿ ಪರಿವರ್ತಿಸಿ, ಅದರ ಸದ್ಬಳಕೆ ಮಾಡಿ ದಾಗ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ~ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನುಡಿದರು.
ನಗರದ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಆಯೋಜಿಸಿದ್ದ ಸಮಗ್ರ ಗುಣಮಟ್ಟ ನಿರ್ವಹಣೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ವಿ. ಲಕ್ಷ್ಮೀ ನಾರಾಯಣ ಮಾತನಾಡಿ, `ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆದು ಅವರ ಸಾಮರ್ಥ್ಯದ ಬಗ್ಗೆ ಅವರಲ್ಲೇ ತಿಳಿವ ಳಿಕೆ ಮೂಡಿಸಿ ಮಾನವ ಸಂಪನ್ಮೂಲದ ಸಮರ್ಥ ಬಳಕೆಗೆ ಇಂಥ ತರಬೇತಿಗಳು ಸಹಾಯಕವಾಗುತ್ತವೆ~ ಎಂದರು.
`ಜಾಗತಿಕ ಮಾರುಕಟ್ಟೆಯಲ್ಲಿ ದೇಶವನ್ನು ಸಮರ್ಥವಾಗಿ ಮುನ್ನಡೆಸಬೇಕಾದರೆ ಗುಣಮಟ್ಟದ ಮಾನವ ಸಂಪನ್ಮೂಲ ಅಗತ್ಯ. ಈ ನಿಟ್ಟಿನಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆಯಂಥ ಕಾರ್ಯಕ್ರಮಗಳು ಅನುಕೂಲಕರ~ ಎಂದು ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ. ಡಿ.ಜಿ. ಕೃಷ್ಣೇಗೌಡ ನುಡಿದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ ಲಲಿತಾದೇವಿ ಮುಂತಾದವರು ವೇದಿಕೆಯಲ್ಲಿದ್ದರು. ಮಾನಸಾ ಸ್ವಾಗತಿಸಿದರು. ಪುಷ್ಪಾಂಜಲಿ ನಿರೂಪಿಸಿದರು. ತೇಜಸ್ ಕುಮಾರ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.