ADVERTISEMENT

ಯೋಗಾಭ್ಯಾಸ ಬೆಳೆಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 6:55 IST
Last Updated 12 ಅಕ್ಟೋಬರ್ 2011, 6:55 IST

ಹಾಸನ: `ಕಿರಿಯ ವಯಸ್ಸಿನಲ್ಲೇ ಯೋಗಾಭ್ಯಾಸ ರೂಢಿ ಸಿಕೊಳ್ಳುವುದು ಒಳ್ಳೆಯ ಹವ್ಯಾಸ. ಇದು ಮನುಷ್ಯನ ಉತ್ತಮ ಆರೋಗ್ಯಕ್ಕೆ ಭದ್ರ ಬುನಾದಿ ಹಾಕಿಕೊಡುತ್ತದೆ~ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಮ್ ನುಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಈಚೆಗೆ ಹಾಸನದಲ್ಲಿ ಆಯೋಜಿಸಿದ್ದ ಮೈಸೂರು ವಿಭಾಗಮಟ್ಟದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಯೋಗಾಸನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಗರಸಭೆ ಅಧ್ಯಕ್ಷ ಸಿ.ಆರ್. ಶಂಕರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಯೋಗ ಶಾಲೆಯ ಯೋಗ ಗುರು ಎಚ್.ಬಿ. ರಮೇಶ್ ಮುಖ್ಯ ಅತಿಥಿಯಾಗಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಟಿ. ಪುಟ್ಟರಾಜು, ಹಾಸನ ವಿಷಯ ಪರಿವೀಕ್ಷಕ ರುದ್ರೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಬಿ.ಎಸ್. ಸೋಮಶೇಖರ್, ಹಾಸನ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎನ್. ಪರಮೇಶ್ ಮತ್ತಿತರರು ವೇದಿಕೆಯಲ್ಲಿದ್ದರು.

ದೈಹಿಕ ಶಿಕ್ಷಣ ಅಧಿಕಾರಿ ಕೆ.ಜಿ. ಈಶ್ವರಪ್ಪ ಸ್ವಾಗತಿಸಿದರು. ಪರಿವೀಕ್ಷಕ ರಂಗಸ್ವಾಮಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.