ADVERTISEMENT

ರಾಜ್ಯೋತ್ಸವ ಸಿದ್ಧತೆಗೆ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2011, 5:15 IST
Last Updated 14 ಅಕ್ಟೋಬರ್ 2011, 5:15 IST

ಹಾಸನ: ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಬುಧವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.

ಸಿದ್ಧತೆಗಾಗಿ ಸನ್ಮಾನ ಸಮಿತಿ, ಮೆರವಣಿಗೆ ಸಮಿತಿ, ಸ್ಥಬ್ಧ ಚಿತ್ರ ಸಮಿತಿ, ಕನ್ನಡ ಪುಸ್ತಕ ಮಾರಾಟ ಮತ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ರಚಿಸಲಾಯಿತು.

ನ.1ರಂದು ಬೆಳಿಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ 8.45ಕ್ಕೆ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಗುವುದು. ನಂತರ 9 ಗಂಟೆಗೆ ರಾಷ್ಟ್ರ ಧ್ವಜಾ ರೋಹಣ ನೆರವೇರುವುದು. ನಂತರ ಸ್ಥಬ್ದ ಚಿತ್ರದೊಂದಿಗೆ ಮೆರವಣಿಗೆಯಲ್ಲಿ ಪೊಲೀಸ್, ಎನ್.ಸಿ.ಸಿ. ಹೋಮ್ ಗಾರ್ಡ್ಸ್, ಸ್ಕೌಟ್ಸ್ ಮತ್ತು ಗೆ ಡ್ಸ್ ಹಾಗೂ ಶಾಲಾ ಮಕ್ಕಳು ಪಾಲ್ಗೊಳ್ಳುವರು.

ಮೆರವಣಿಗೆಯು ಸಾಲಗಾಮೆ ರಸ್ತೆ ಮೂಲಕ ಮಹಾವೀರ ವೃತ್ತ, ಕಸ್ತೂರ ಬಾ ರಸ್ತೆ, ಸುಭಾಷ್ ಚೌಕ, ಎಂ.ಹೆಚ್.ವೃತ್ತ, ನರಸಿಂಹರಾಜ ವೃತ್ತದಿಂದ ಹೇಮಾ ವತಿ ಪ್ರತಿಮೆ ಮೂಲಕ ಮಹಾವೀರ ವೃತ್ತಕ್ಕೆ ಸೇರಿ ಕಲಾಭವನಕ್ಕೆ ತಲುಪುವುದು.

ರಾಜ್ಯೋತ್ಸವ ದಿನದಂದು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕನ್ನಡ ಪುಸ್ತಕಗಳನ್ನು ಶೇ 25ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ವ್ಯವಸ್ಥೆ ಮಾಡುವಂತೆ ತಿಳಿಸಿದರಲ್ಲದೆ, ಖಾಸಗಿ ಯವರು ಶೇಕಡ 25 ರಿಯಾಯಿತಿ ದರದಲ್ಲಿ ಮಾರಾಟ ಮಾಡುವುದಾದರೆ ಅವಕಾಶ ಕಲ್ಪಿಸುವಂತೆ ಸೂಚಿಸಿದರು.

ನಗರದ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡದಲ್ಲೇ ನಾಮಫಲಕ ಹಾಕುವಂತೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗು ವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ, ಉಪವಿಭಾಗಾಧಿಕಾರಿ ಶಶಿಧರ ಕುರೇರ ಮತ್ತು ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿ ಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.