ADVERTISEMENT

ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಅವಶ್ಯ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2012, 6:00 IST
Last Updated 15 ಫೆಬ್ರುವರಿ 2012, 6:00 IST

ಆಲೂರು: ವಿದ್ಯಾರ್ಥಿಗಳ ನೈತಿಕ ಮಟ್ಟವೃದ್ಧಿಸಲು ಮತ್ತು ಸಮಾಜದ ಅಭಿವೃದ್ಧಿಯಲ್ಲಿ ದೈಹಿಕ ಶಿಕ್ಷಣ, ಶಿಕ್ಷಕರ ಪಾತ್ರ ಅಪಾರ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಾಧಾ ಕುಮಾರ್ ಹೇಳಿದರು.

ಪಟ್ಟಣದ ಕಲೀವೀರ್ ವಸತಿ ಪ್ರೌಢಶಾಲೆ ಸಭಾಂಗಣದಲ್ಲಿ ಈಚೆಗೆ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮತ್ತು ಕಲೀವೀರ್ ವಸತಿ ಪ್ರೌಢಶಾಲೆ ಆಶ್ರಯದಲ್ಲಿ ಏರ್ಪಡಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 116ನೇ ಜನ್ಮ ದಿನಾಚರಣೆ ಹಾಗೂ ತಾಲ್ಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ 15ನೇ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದರು.

ಶಿಕ್ಷಕರಿಂದ ಸಂಸ್ಕಾರ ಕಲಿತು ವಿದ್ಯಾರ್ಥಿಗಳು ಬೆಳೆಯಬೇಕು. ಮಕ್ಕ ಳಲ್ಲಿ ಶಿಸ್ತು, ಸಂಯಮ ಮೂಡಿಸಲು ದೈಹಿಕ ಶಿಕ್ಷಕರ ಪಾತ್ರ ಅತಿ ಮುಖ್ಯ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪುರುಷೋತ್ತಮ್ ಮಾತನಾಡಿ, ತಂದೆ- ತಾಯಿ ಅವರನ್ನು ಸ್ಮರಿಸುವಂತೆ ಉತ್ತಮ ಜೀವನ ಮಾರ್ಗ ತೋರಿದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಯಾವಾಗಲೂ ಸ್ಮರಿಸಬೇಕು ಎಂದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್. ಮಂಜೇಗೌಡ, ಪ್ರಾಂಶುಪಾಲ ಯು.ಎ. ವೆಂಕಟರಾಮು, ಕೆ.ಕೆ. ಸಿದ್ದೇಗೌಡ, ಜೆಡಿಎಸ್ ಮುಖಂಡ ಎಚ್.ಇ. ದ್ಯಾವಪ್ಪ, ತಾಲ್ಲೂಕು ಪ್ರೌಢಶಾಲಾ ದೈಹಿಕ ಶಿಕ್ಷಕಕ ಸಂಘದ ಅಧ್ಯಕ್ಷ ಎಚ್.ಪಿ. ವೆಂಕಟೇಶ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ, ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಮೂರ್ತಿ ಮಾತಾಡಿದರು.

ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಜೆ. ಈಶ್ವರಪ್ಪ ಅವರನ್ನು ಸನ್ಮಾನಿ ಸಲಾಯಿತು. ಎಸ್‌ಎಸ್‌ಎಲ್‌ಸಿ/ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯುತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.