ADVERTISEMENT

ಶೀಘ್ರ ಸ್ನಾತಕೋತ್ತರ ಕೇಂದ್ರ ಆರಂಭ: ಶಾಸಕ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2011, 9:35 IST
Last Updated 15 ಅಕ್ಟೋಬರ್ 2011, 9:35 IST

ಚನ್ನರಾಯಪಟ್ಟಣ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಂದಿನ ದಿನಗಳಲ್ಲಿ ಸ್ನಾತ್ತಕೋತ್ತರ ಕೇಂದ್ರ    ಆರಂಭಿಸುವ ಉದ್ದೇಶವಿದೆ ಎಂದು ಶಾಸಕ ಸಿ.ಎಸ್. ಪುಟ್ಟೇಗೌಡ, ಶುಕ್ರವಾರ ಇಲ್ಲಿ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಏರ್ಪಡಿಸಿದ್ದ `ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಉದ್ಘಾಟನೆ, ಕಾಲೇಜು ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭ~ ಉದ್ಘಾಟಿಸಿ ಮಾತನಾಡಿದರು.

2.50 ಕೋಟಿ ರೂ. ವೆಚ್ಚದಲ್ಲಿ ಪದವಿ ಕಾಲೇಜು ಕಟ್ಟಡ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದೆ.           ಸ್ನಾತ್ತಕೋತ್ತರ ಕೇಂದ್ರದಲ್ಲಿ ಯಾವ್ಯಾವ ಕೋರ್ಸ್ ಆರಂಭಿಸಬೇಕೆಂಬುದರ ಬಗ್ಗೆ ಉನ್ನತ ಶಿಕ್ಷಣ ಸಚಿವರು, ಮೈಸೂರು ವಿವಿ ಉಪಕುಲಪತಿಗಳೊಂದಿಗೆ ಚರ್ಚಿಸಲಾಗುವುದು. ಇದಕ್ಕೆ ಏನೇನು ಸೌಲಭ್ಯದ ಅಗತ್ಯವಿದೆ ಎಂಬುದನ್ನು ಕಾಲೇಜು ಪ್ರಾಚಾರ್ಯರು ಮಾಹಿತಿ ನೀಡಬೇಕು ಎಂದು ಹೇಳಿದರು.

ಪಟ್ಟಣದಲ್ಲಿ ಮಹಿಳಾ ಪದವಿ ಕಾಲೇಜು ತೆರೆಯುವ ಉದ್ದೇಶ ಹೊಂದಲಾಗಿದೆ. ಕಾಲೇಜು ಬಳಿ ಬಸ್‌ಶೆಲ್ಟರ್ ನಿರ್ಮಿಸಲಾಗುವುದು ಎಂದು ತಿಳಿಸಿದರು. ಎಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ     ಸಿ.ಎನ್. ಬಾಲಕೃಷ್ಣ,  ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಚ್.ಎಸ್. ಮುದ್ದೇಗೌಡ, ವಾರ್ಷಿಕ ಸಂಚಿಕೆ ಬಿಡುಗಡೆ   ಮಾಡಿದರು.

ಕೆ.ಆರ್. ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಸಿದ್ದರಾಮೇಗೌಡ, ಕಾಲೇಜು ಪ್ರಾಚಾರ್ಯ ಪ್ರೊ.ಎಂ.ಕೆ. ಉಮಾನಾಥ್,  ಕಸಾಪ ಅಧ್ಯಕ್ಷ ಎಚ್. ಸಿದ್ದೇಗೌಡ,  ಸಾಂಸ್ಕ್ರತಿಕ ಕಾರ್ಯದರ್ಶಿ ಎಚ್.ಕೆ. ಅಶೋಕ್,  ಕ್ರೀಡಾಕಾರ್ಯದರ್ಶಿ ಜೆ.ಕೆ. ಪವನ್, ಎನ್‌ಎಸ್‌ಎಸ್ ಅಧಿಕಾರಿ ಬೋರೇಗೌಡ  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.