ADVERTISEMENT

ಶುಲ್ಕ ವಿನಾಯಿತಿ ರದ್ದತಿಗೆ ವ್ಯಾಪಕ ವಿರೋಧ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2012, 4:30 IST
Last Updated 13 ಅಕ್ಟೋಬರ್ 2012, 4:30 IST

ಚನ್ನರಾಯಪಟ್ಟಣ: ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡಿದ್ದ ಶುಲ್ಕ ವಿನಾಯಿತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಾಸಕ ಸಿ.ಎಸ್. ಪುಟ್ಟೇಗೌಡ ಅವರ ನೇತೃತ್ವದಲ್ಲಿ ಪಟ್ಟಣದ ಬಿ.ಎಂ. ರಸ್ತೆಯಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಮಿನಿವಿಧಾನ ಸೌಧದ ಆವರಣಕ್ಕೆ ಬಂದು ಸೇರಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾನಾಡಿದ ಶಾಸಕ ಪುಟ್ಟೇಗೌಡ, ಪರೀಕ್ಷಾ ಶುಲ್ಕವನ್ನು ಏಕಾಏಕಿ ಹೆಚ್ಚು ಮಾಡಿರುವ ಸರ್ಕಾರದ ಕ್ರಮ ಸರಿಯಲ್ಲ. ಸರ್ಕಾರ ಇನ್ನಿತರೆ ಕೆಲಸಕ್ಕೆ ಕೋಟ್ಯಂತರ ರೂ. ವ್ಯಯ ಮಾಡುತ್ತದೆ. ಆದರೆ ಶಿಕ್ಷಣ ಕ್ಷೇತ್ರದಲ್ಲಿ ದುಬಾರಿ ಶುಲ್ಕ ವಿಧಿಸುತ್ತಿದೆ.  ಪರೀಕ್ಷಾ ಶುಲ್ಕ ಕಡಿಮೆ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಗಮನಕ್ಕೆ ತರಲಾಗುವುದು. ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ವಿದ್ಯಾರ್ಥಿಗಳು ತಹಶೀಲ್ದಾರ್ ಎಚ್.ಎಸ್. ಸತೀಶ್‌ಬಾಬು ಅವರಿಗೆ ಮನವಿ ಸಲ್ಲಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.