ADVERTISEMENT

ಸರ್ಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ ಆರಂಭಿಸಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2013, 6:56 IST
Last Updated 14 ಸೆಪ್ಟೆಂಬರ್ 2013, 6:56 IST

ಹಾಸನ: ‘ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ಒಂದನೇ ತರಗತಿಯಿಂದ ಆಂಗ್ಲಮಾಧ್ಯಮ ಶಿಕ್ಷಣ ನೀಡುವುದು ಅನಿವಾಯರ್ವಾಗಿದ್ದು, ಸರ್ಕಾರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾಸನ ಜಿಲ್ಲಾ ಘಟಕ ಆಗ್ರಹಿಸಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಂಘದ ಅಧ್ಯಕ್ಷ ಶಿವೇಗೌಡ, ‘ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ರೂಪಿಸಿರುವ ಎಲ್ಲ ಯೋಜನೆಗಳನ್ನು ಜಾರಿ ಮಾಡಿದರೂ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿಲ್ಲ.

ಹಾಸನದಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ ‘ಮಕ್ಕಳ ಮನೆ’ಗೆ ಸಾಕಷ್ಟು ಮಕ್ಕಳು ಬಂದರೂ, ಯು.ಕೆ.ಜಿ. ಬಳಿಕ ಅವರೆಲ್ಲರೂ ಸಮೀಪದ ಕಾನ್ವೆಂಟ್‌ಗಳಿಗೆ ಹೋಗು ತ್ತಾರೆಯೇ ವಿನಾ ಸರ್ಕಾರಿ ಶಾಲೆಗೆ ಬರುತ್ತಿಲ್ಲ. ಈ ಬಗ್ಗೆ ಪಾಲಕರನ್ನು ಕೇಳಿದರೆ ‘ನಿಮ್ಮಲ್ಲಿ ಆಂಗ್ಲಮಾಧ್ಯಮ ಇಲ್ಲದ ಕಾರಣ ನಾವು ಖಾಸಗಿ ಶಾಲೆಗಳಿಗೆ ಕಳುಹಿಸುತ್ತೇವೆ’ ಎಂಬ ಉತ್ತರ ಬಂದಿದೆ. ಈ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದರು.

ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಪಠ್ಯಕ್ರಮದಿಂದ ಆರಂಭಿಸಿ ಸಮವಸ್ತ್ರದ ವರೆಗೆ  ಎಲ್ಲ ಕಡೆ ತಾರತಮ್ಯ ಇದೆ. 6ರಿಂದ 14ವಷರ್ದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಸರ್ಕಾರ ಜಾರಿ ಮಾಡಿದ್ದರೂ ಅದು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಜಾರಿಯಾಗುತ್ತಿದೆ. ಖಾಸಗಿ ಶಾಲೆಗಳು ಬೇಕಾಬಿಟ್ಟಿಯಾಗಿ ವತಿರ್ಸುತ್ತಿವೆ.

ಸರ್ಕಾರಿ ಶಾಲೆಯಲ್ಲಿ ಕಲಿತರೆ ಮಕ್ಕಳಿಗೆ ಒಳ್ಳೆಯ ಭವಿಷ್ಯ ಇರುವುದಿಲ್ಲ ಎಂಬ ಭಾವನೆ ಪಾಲಕರಲ್ಲಿ ಬಂದಿದೆ. ಇದನ್ನು ಹೋಗಲಾಡಿಸಲು ಏಕರೂಪದ ಪಠ್ಯಕ್ರಮ ಜಾರಿ ಮಾಡುವದೇ ಮಾರ್ಗ. ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಹಾದಿ ಹಿಡಿಯುತ್ತೇವೆ ಎಂದು  ಶಿವೇಗೌಡ ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಕಾಳೇಗೌಡ ಕೆ.ಎ, ಫಾಲಾಕ್ಷ ಎಚ್‌.ವಿ, ಚೈತ್ರಾ ಕೆ.ಎನ್‌, ನಾಗರತ್ನ ಸಿ.ಎಂ ಆಗೂ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.