ADVERTISEMENT

ಸುಗಮ ಮತದಾನ: ಸೂಕ್ತ ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 5:56 IST
Last Updated 6 ಏಪ್ರಿಲ್ 2013, 5:56 IST

ಹಾಸನ: `ಮುಂಬರುವ ಚುನಾವಣೆಯ ಸಂದರ್ಭದಲ್ಲಿ ಮತ ದಾರರ ಪಟ್ಟಿಯಲ್ಲಿ ಯಾವುದೇ ಗೊಂದಲಗಳಾಗದಂತೆ ನೋಡಿಕೊಳ್ಳಬೇಕು. ನಗರ, ಗ್ರಾಮಾಂತರ ಪ್ರದೇಶಗಳ ಎಲ್ಲ ಮತದಾರರು ಮತದಾನಕ್ಕೆ ಬರುವಂತೆ ಮಾಡಬೇಕು. ಈ ನಿಟ್ಟಿಯಲ್ಲಿ ಬ್ಲಾಕ್ ಮಟ್ಟದ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಹಾಸನ ತಾಲ್ಲೂಕಿನ ಬ್ಲಾಕ್ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, `ಮತದಾರ ಪಟ್ಟಿಯಲ್ಲಿ ಸೇರ್ಪಡೆಗೆ ಸಂಬಂಧಿಸಿದಂತೆ ಮಾಹಿತಿ ಕೊರತೆಯಿಂದ ಸಾರ್ವಜನಿಕರು ಪರದಾಡುವಂತಾಗ ಬಾರದು. ಉಳಿದಿರುವ ಎರಡು ದಿನಗಳಲ್ಲಿ ಎಲ್ಲ ಅರ್ಹ ಮತದಾರರು ಪಟ್ಟಿಗೆ ಸೇರ್ಪಡೆಯಾಗಬೇಕು ಎಂದರು.

ಚುನಾವಣಾ ಆಯೋಗದ ಪರವಾಗಿ ಬಿ.ಎಲ್.ಓ.ಗಳು ಪ್ರತಿ ಮನೆಗೆ ತೆರಳಿ ಮತದಾರರಿಗೆ ಮತ ಚೀಟಿಯನ್ನು ತಲು ಪಿಸಬೇಕು. ಮತದಾರರ ಶಿಕ್ಷಣ ಮತ್ತು ಸಹಭಾಗಕ್ಕೆ ಸಮಿತಿ ಸೇರಿದಂತೆ ವಿವಿಧ ಮೂಲಗಳಿಂದಲೂ ಮತದಾರರ ಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತವೆ. ಬಿ.ಎಲ್.ಓ. ಗಳು ಇದಕ್ಕೆ ಸಹಕಾರ ನೀಡಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲ ಕೃಷ್ಣ, ಚುನಾವಣೆಯಲ್ಲಿ ಬೂತ್  ಮಟ್ಟದ ಅಧಿಕಾರಿಗಳ ಪಾತ್ರ ಮಹತ್ತರವಾದದ್ದು, ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗೃತಿಗೊಳಿಸುವ ಕಾರ್ಯವನ್ನು ಮಾಡ ಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ಎಚ್ಚರ ವಹಿಸಿ ಕೆಲಸ ಮಾಡಬೇಕು' ಎಂದರು.

ತಹಶೀಲ್ದಾರ್ ಮಂಜುನಾಥ್ ಮಾತನಾಡಿ, 126 ಬೂತ್ ಮಟ್ಟದ ಅಧಿಕಾರಿಗಳು ಈವರೆಗೆ ಮಾಡಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಜಗದೀಶ್, ಚುನಾವಣೆ ವಿಶೇಷ  ಅಧಿಕಾರಿ ನೂರೂಲ್ಲಾ ಷರೀಪ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ   ಕೆ. ರಾಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪುಟ್ಟರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.