ADVERTISEMENT

ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿ

​ಪ್ರಜಾವಾಣಿ ವಾರ್ತೆ
Published 13 ಮೇ 2018, 10:32 IST
Last Updated 13 ಮೇ 2018, 10:32 IST

ಹಾಸನ: ರಕ್ತದಾನ ಶ್ರೇಷ್ಠ ದಾನವಾಗಿದ್ದು, 18 ವರ್ಷ ಮೇಲ್ಪಟ್ಟ ಆರೋಗ್ಯವಂತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಸಂಕಷ್ಟದಲ್ಲಿದ್ದವರ ಜೀವ ಉಳಿಸಲು ಮುಂದಾಗಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇ.ಎನ್.ಸಿ.ಎಸ್. ಒಪನ್ ಗ್ರೂಪ್‌ ಉಪಾಧ್ಯಕ್ಷ ಜಾವಿದ್ ಖಾನ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹೊಮ್ಮಗೌಡನಹಳ್ಳಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘ ಹಾಗೂ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ರಕ್ತನಿಧಿ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಅಪಘಾತ, ಗರ್ಭಿಣಿಯರ ರಕ್ತಹೀನತೆ, ಡೆಂಗಿ ಸೇರಿ ವಿವಿಧ ಕಾಯಿಲೆಗಳ ಹಿನ್ನೆಲೆಯಲ್ಲಿ ರಕ್ತಕ್ಕೆ ಬೇಡಿಕೆ ಹೆಚ್ಚಿದೆ. ಜಿಲ್ಲೆಯ ಸರ್ಕಾರಿ ರಕ್ತನಿಧಿಯಲ್ಲಿ ಸಾಕಷ್ಟು ರಕ್ತ ಸಿಗಬೇಕಾದರೆ ಜನಸಾಮಾನ್ಯರು ಅದರಲ್ಲೂ ಯುವಪೀಳಿಗೆ ರಕ್ತದಾನ ಮಾಡುವಂತಹ ಉದಾರ ಹೃದಯವಂತಿಕೆ ಬೆಳೆಸಿಕೊಳ್ಳಬೇಕಿದೆ ಎಂದರು.

ADVERTISEMENT

ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿ ಹಾಗೂ ಸದಸ್ಯರು, ಜಯಚಾಮರಾಜೇಂದ್ರ ಆಸ್ಪತ್ರೆ ರಕ್ತನಿಧಿ ವಿಭಾಗದ ಹಿರಿಯ ತಾಂತ್ರಿಕ ತಂತ್ರಜ್ಞ ಸಿ.ಎಸ್.ಶಿವಸ್ವಾಮಿ, ಅಲ್ಕೂರ್ ಸ್ವಾಮಿ, ನಜೀಮ್, ಇಎನ್‌ಪಿಎಸ್‌ ಒಪನ್ ಗ್ರೂಪ್ ಅಧ್ಯಕ್ಷ ಕೊಟ್ರೇಶ್ ಎಸ್.ಉಪ್ಪಾರ್, ಕಾರ್ಯದರ್ಶಿ ಆರ್.ಜಿ.ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.