ADVERTISEMENT

ಹಾರನಹಳ್ಳಿ ಕೆರೆಗೆ ನೀರು ತುಂಬಿಸಲು ಆಗ್ರಹ

ಆರ್.ಚೌಡರೆಡ್ಡಿ
Published 2 ಜುಲೈ 2013, 8:01 IST
Last Updated 2 ಜುಲೈ 2013, 8:01 IST

ಅರಸೀಕೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಾರನಹಳ್ಳಿ ದೊಡ್ಡ ಕೆರೆಗೆ ಯಗಚಿ ನದಿ ಮೂಲದಿಂದ ನೀರು ತುಂಬಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ರೈತ ಸಂಘದ ಮುಖಂಡರು ಹಾಗೂ ಹಾರನಹಳ್ಳಿ ಗ್ರಾಮಸ್ಥರು ಎತ್ತುಗಳೊಂದಿಗೆ ಸೋಮವಾರ ಗ್ರಾಮದ ಮುಂಭಾಗ ಅರಸೀಕೆರೆ-ಹಾಸನ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ಮುಖಂಡ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕರೀಂಸಾಬ್ ನೇತೃತ್ವದಲ್ಲಿ ನೂರಾರು ಗ್ರಾಮಸ್ಥರು ತಮ್ಮ ಜಾನು ವಾರುಗಳೊಂದಿಗೆ ರಸ್ತೆಯಲ್ಲಿ ಜಮಾಯಿಸಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತ ಪಡಿಸಿದರು.

ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಸನ್ನಕುಮಾರ್, 2 ವರ್ಷಗಳಿಂದಲೂ ಹಾರನಹಳ್ಳಿ ಕೆರೆಗೆ ಯಗಚಿ ನದಿ ಮೂಲದಿಂದ ನೀರನ್ನು ತುಂಬಿಸಬೇಕು ಎಂದು ಹೋರಾಟ ನಡೆಸುತ್ತಾ ಬಂದಿದ್ದು, ಪ್ರತಿಭಟನೆಯ ಸಂದರ್ಭದಲ್ಲಿ ಬರುವ ಅಧಿಕಾರಿಗಳು ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನೀರು ತುಂಬಿಸುವ ವ್ಯವಸ್ಥೆ ಮಾಡುತ್ತೆವೆ ಎಂದು ಭರವಸೆ ನೀಡುತ್ತಾ ಬಂದಿದ್ದಾರೆಯೇ ಹೊರತು ಇದುವರೆವಿಗೂ ಭರವಸೆ ಕಾರ್ಯಗತವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ತಹಶೀಲ್ದಾರ್ ಕೇಶವಮೂರ್ತಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಸರ್ಕಾರಕ್ಕೆ ವರದಿ ಕಳಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು..      
ಜೂಜು: ಐವರ ಬಂಧನ
ಅರಸೀಕೆರೆ: ಜೂಜಾಡುತ್ತಿದ್ದ ಐವರನ್ನು ಬಂಧಿಸಿರುವ ಅರಸೀಕೆರೆ ಗ್ರಾಮಾಂತರ ಪೊಲೀಸರು ರೂ. 3600 ರೂಪಾಯಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಖಚಿತ ಸುಳುವಿನ ಮೇರೆ ಅರಸೀಕೆರೆ ಗ್ರಾಮಾ ಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುನಿಲ್ ತಮ್ಮ ಸಿಬ್ಬಂದಿಯೊಡನೆ ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಅದೇ ಗ್ರಾಮದ ವಾಸಿಗಳಾದ ರಾಜಶೇಖರ್,   ಕುಮಾರ್, ರಾಜು, ಯೋಗೀಶ್ ಹಾಗೂ ವೀರಭದ್ರಪ್ಪ ಅವರನ್ನು ಬಂಧಿಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.