ADVERTISEMENT

ಹೊಸ ತಾಲ್ಲೂಕು: ಪ್ರಕಾಶ್‌ ವರದಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಜನವರಿ 2014, 5:38 IST
Last Updated 6 ಜನವರಿ 2014, 5:38 IST

ಆಲೂರು: ರಾಜ್ಯದಲ್ಲಿ ತಾಲ್ಲೂಕುಗಳ ವಿಂಗಡಣೆ ಬಗ್ಗೆ ಎಂ.ಪಿ. ಪ್ರಕಾಶ್ ವರದಿಯನ್ನು ತಕ್ಷಣ ಜಾರಿಗೊಳಿಸ ಬೇಕೆಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಆಗ್ರಹಿಸಿದರು.

ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ಈಚೆಗೆ ಏರ್ಪಡಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಎರಡು ತಾಲ್ಲೂಕು ಒಂದೇ ಕ್ಷೇತ್ರಕ್ಕೆ ಸೇರಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಎಂ.ಪಿ. ಪ್ರಕಾಶ್ 43 ತಾಲ್ಲೂಕುಗಳ ರಚನೆಗೆ ವರದಿಯನ್ನು ನೀಡಿದ್ದರು. ಅದು ಜಾರಿಗೆ ಬರುವ ಅಗತ್ಯವಿದೆ ಎಂದರು.

ತಾಲ್ಲೂಕು ತಹಶೀಲ್ದಾರ್ ಎನ್.ಕೆ. ಶಾರದಾಂಬಾ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ನಾಗಮ್ಮ ಅಜ್ಜೇಗೌಡ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದರು. ವಲಯ ಅರಣ್ಯಾಧಿಕಾರಿ ದೇವರಾಜ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.