ಅರಕಲಗೂಡು: ಚುನಾವಣೆಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆಮಾಡಿದಾಗ ಮಾತ್ರ ಪ್ರಜಾಪ್ರಭುತ್ವ ಅರ್ಥಪೂರ್ಣಗೊಳ್ಳಲು ಸಾಧ್ಯ ಎಂದು ಹಾಸನ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕ ಪ್ರೊ. ಶಿವೇಗೌಡ ತಿಳಿಸಿದರು.
ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆಗಳ ಮಹತ್ವ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತಾಧಿಕಾರ ಅತ್ಯಂತ ಮಹತ್ವವಾದುದು, ಪ್ರತಿಯೊಬ್ಬ ಪ್ರಜೆಯೂ ಇದನ್ನು ಬಳಸಿಕೊಂಡು ಯೋಗ್ಯ ಪ್ರತಿನಿಧಿಗಳನ್ನು ಚುನಾಯಿಸಿದಾಗ ದೇಶ ಅಭಿವೃದ್ದಿ ಪಥದಲ್ಲಿ ಸಾಗಲು ಸಾಧ್ಯವಾಗುವುದು, ಮತದಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಬಸವರಾಜ್ ಮಾತನಾಡಿದರು.
ಪ್ರಾಂಶುಪಾಲ ಪ್ರೊ.ಜನಾರ್ದನ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಿವಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕರಾದ ರಾಮಸ್ವಾಮಿ, ಡಾ. ಈಶ್ವರ್, ಧರ್ಮೇಗೌಡ, ಕುಮಾರಸ್ವಾಮಿ ಉಪಸ್ಥಿತರಿದ್ದರು. ಸಂತೋಷ್‌ಕುಮಾರ್ ಸ್ವಾಗತಿಸಿ, ಎಂ.ವಿ. ದಿವ್ಯ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.