ADVERTISEMENT

‘ಬ್ಯಾಂಕ್‌ ಸೌಲಭ್ಯದಿಂದ ಶೈಕ್ಷಣಿಕ ಪ್ರಗತಿ ಸಾಧಿಸಿ’

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 9:35 IST
Last Updated 7 ಮಾರ್ಚ್ 2014, 9:35 IST

ಜಾವಗಲ್‌: ಆರ್ಥಿಕ ಸಂಕಷ್ಟಗಳ ನಡುವೆಯೂ ಬ್ಯಾಂಕ್‌ಗಳು ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಬಹುದಾಗಿದೆ ಎಂದು ಜಾವಗಲ್‌ ವಿಜಯ ಬ್ಯಾಂಕ್‌ ಶಾಖಾಧಿಕಾರಿ ರಾಜಶೇಖರ್‌ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಂದಾ್ರಳು ಗ್ರಾಮದಲ್ಲಿ  ಬುಧವಾರ ಏರ್ಪಡಿಸಿರುವ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.

ಬ್ಯಾಂಕ್‌ಗಳು ಇತ್ತೀಚಿನ ವರ್ಷಗಳಲ್ಲಿ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಅಲ್ಪಾವಧಿ, ಮಧ್ಯಮಾವಧಿ ಹಾಗು ದೀರ್ಘಾವಧಿ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ಭದ್ರತೆ ಇಲ್ಲದೆ ₨ 4 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ₨ 4.5 ಲಕ್ಷ ಆದಾಯ ಹೊಂದಿರುವವರಿಗೆ ಸರ್ಕಾರವು ಬಡ್ಡಿಯಲ್ಲಿ ರಿಯಾಯಿತಿ ನೀಡುತ್ತದೆ. ಉನ್ನತ ಶಿಕ್ಷಣಕ್ಕೆ ಗಾಮೀಣ ಭಾಗದ ವಿದ್ಯಾರ್ಥಿಗಳಿಗೂ ಹೆಚ್ಚಿನ ಸಾಲ ಸೌಲಭ್ಯ ಒದಗಿಸುತ್ತದೆ. ಈ ಎಲ್ಲಾ ಸೌಲಭ್ಯಗಳನ್ನು ರೈತರು ಹಾಗು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳ ಬೇಕೆಂದು ತಿಳಿಸಿದರು. 

  ಸಹ ಪ್ರಾಧ್ಯಾಪಕ ಸತೀಶ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡೇರಿ ಉಪಾಧ್ಯಕ್ಷ ಶಿವಕುಮಾರ್‌, ಸಣ್ಣ ಬಸವಾಚಾರ್‌, ಗ್ರಂಥಪಾಲಕಿ ದೀಪಿಕಾ, ಮುಖ್ಯಶಿಕ್ಷಕ ಲಕ್ಷ್ಮಣ ಶೆಟ್ಟಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.