ADVERTISEMENT

‘ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ ಕಲಿಸಿ’

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2013, 6:28 IST
Last Updated 24 ಸೆಪ್ಟೆಂಬರ್ 2013, 6:28 IST

ಹಾಸನ: ‘ವಿದ್ಯಾರ್ಥಿಗಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವ ಜವಬ್ದಾರಿ ಶಿಕ್ಷಕರ ಮೇಲಿದೆ’ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಚ್‌.ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

ನಗರದ ಜಿಲ್ಲಾ ನಿವೃತ್ತ ನೌಕರರ ಸಮುದಾಯ ಭವನದಲ್ಲಿ ಈಚೆಗೆ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಮಾರ್ಗದರ್ಶನ ಅನುಸರಿಸುವ ಮೂಲಕ ಗುರಿ ಸಾಧಿಸಬೇಕು’ ಎಂದರು.

ನಿವೃತ್ತ ಶಿಕ್ಷಕ ಎಚ್‌.ಆರ್‌. ಮಂಜಪ್ಪಗೌಡ ಮಾತನಾಡಿದರು. ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಚ್‌. ಅನಂತರಾಮು ಅಧ್ಯಕ್ಷತೆ ವಹಿಸಿದ್ದರು. ವೈದ್ಯ ಡಾ. ಗುರುರಾಜ್ ಹೆಬ್ಬಾರ್‌, ಸಂಘದ ಉಪಾಧ್ಯಕ್ಷ ಎಚ್‌.ಎಸ್‌. ಸತ್ಯಮೂರ್ತಿ, ಜೆ.ಎನ್‌. ರಾಮಸ್ವಾಮಿ, ಕೆ.ಸಿ. ಬಸವರಾಜು ಹಾಗೂ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.