ADVERTISEMENT

ಹಾಸನ | ಒಂದೇ ದಿನ 101 ಮಂದಿಗೆ ಸೋಂಕು

ವೃದ್ಧ ಸಾವು, ಚೇತರಿಸಿಕೊಂಡ 20 ಮಂದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 14:26 IST
Last Updated 31 ಜುಲೈ 2020, 14:26 IST
ಹಿಮ್ಸ್‌ ಆಸ್ಪತ್ರೆ
ಹಿಮ್ಸ್‌ ಆಸ್ಪತ್ರೆ   

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ ಶುಕ್ರವಾರ 101 ಕೋವಿಡ್‌ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2131ಕ್ಕೆ ಏರಿಕೆಯಾಗಿದೆ. ಜತೆಗೆ ವೃದ್ಧ ಮೃತಪಟ್ಟಿದ್ದಾರೆ.

ಈ ವರೆಗೆ ಸೋಂಕಿನಿಂದ ಸತ್ತವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. 1149 ಸಕ್ರಿಯ ಪ್ರಕರಣಗಳಿದ್ದು, 921 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 26 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಅರಸೀಕೆರೆ 13, ಬೇಲೂರು 30, ಚನ್ನರಾಯಪಟ್ಟಣ 5, ಹಾಸನ 49, ಆಲೂರು, ಅರಕಲಗೂಡು,ಹೊಳೆನರಸೀಪುರ ಹಾಗೂ ಸಕಲೇಶಪುರ ತಾಲ್ಲೂಕಿನ ಒಬ್ಬರಿಗೆ ಸೋಂಕು ದೃಢಪಟ್ಟಿದೆ. 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಅಗಿದ್ದಾರೆ.

ADVERTISEMENT

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬೇಲೂರಿನ 66 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ ಐವತ್ತು ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಬೆಂಗಳೂರು, ಮಂಡ್ಯ, ಉತ್ತರ ಪ್ರದೇಶ, ತುಮಕೂರು ಪ್ರಯಾಣ ಹಿನ್ನೆಲೆ, ಶೀತ, ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆ ಇರುವವರಿಗೆ ಸೋಂಕು ತಗುಲಿದ್ದು, ಹಲವು ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆ ಆಗಿಲ್ಲ ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಕುಮಾರ್‌ ತಿಳಿಸಿದರು.

ರೋಗ ಲಕ್ಷಣ ಇಲ್ಲದ ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ಕ
ಪಕ್ಕದ ಮನೆಯವರು ಹಾಗೂ ಊರಿನವರು ಅವರನ್ನು ಕಳಂಕಿತರಂತೆ ಕಾಣಬಾರದು. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಜ್ವರ, ಶೀತ, ಕೆಮ್ಮು, ಗಂಟಲು ನೋವಿನ ಲಕ್ಷಣ ಇರುವವರು ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಡಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.