ADVERTISEMENT

129 ಕೋವಿಡ್ ಲಸಿಕಾ ಬೂತ್ ಸ್ಥಾಪನೆ

ಪಿಂಕ್‌ ಬೂತ್ ಉದ್ಘಾಟಿಸಿದ ಜಿಲ್ಲಾಧಿಕಾರಿ ಆರ್‌.ಗಿರೀಶ್‌

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 15:21 IST
Last Updated 8 ಮಾರ್ಚ್ 2021, 15:21 IST
ಹಾಸನದ ಎಂ.ಕೃಷ್ಣ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಿಂಕ್‌ ಬೂತ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಮಹಿಳೆಯರು.
ಹಾಸನದ ಎಂ.ಕೃಷ್ಣ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಿಂಕ್‌ ಬೂತ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಮಹಿಳೆಯರು.   

ಹಾಸನ: ಜಿಲ್ಲೆಯಲ್ಲಿ 129 ಕೋವಿಡ್ ಲಸಿಕೆ ಬೂತ್ ಗಳನ್ನು ಸ್ಥಾಪಿಸಲಾಗಿದ್ದು, 5 ಖಾಸಗಿ ಆಸ್ಪತ್ರೆಗಳಲ್ಲಿಯೂ 2 ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ನಗರದ ಹೊಸ್ ಲೈನ್ ರಸ್ತೆಯಲ್ಲಿರುವ ಎಂ.ಕೃಷ್ಣ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ವ್ಯವಸ್ಥೆ ಮಾಡಿರುವ ಪ್ರತ್ಯೇಕ ಗುಲಾಬಿ ಬಣ್ಣದ (ಪಿಂಕ್)ಲಸಿಕಾ ಬೂತ್ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ದಿನಾಚರಣೆ ಹಿನ್ನೆಲೆ ರಾಜ್ಯದಾದ್ಯಂತ ವಿಶೇಷವಾಗಿ ಮೂರು ಸಾವಿರ ಪಿಂಕ್ ಬೂತ್‌ ಗಳನ್ನು ಸ್ಥಾಪಿಸಿ ಮಹಿಳೆಯರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

60 ವರ್ಷ ದಾಟಿದ, 45 ವರ್ಷ ಮೇಲ್ಪಟ್ಟ ಬಹು ಸ್ವರೂಪದ ರೋಗದಿಂದ ಬಳಲುತ್ತಿರುವವರು ಹೆಸರು ನೋಂದಾಯಿಸಿಕೊಂಡು ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ADVERTISEMENT

ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡೂ ಲಸಿಕೆಗಳನ್ನು ಸಂಪೂರ್ಣ ಸುರಕ್ಷಿತವಾಗಿವೆ. ಲಸಿಕೆ ಪಡೆದವರಿಗೆ ಈವರೆಗೂ ದೇಶದಲ್ಲಿ ಯಾವುದೇ ರೀತಿಯ ಅಡ್ಡ ಪರಿಣಾಮಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಬರದಂತೆ ತಡೆಗಟ್ಟಲು ಸರ್ಕಾರದ ಜೊತೆಗೆ ಸಾರ್ವಜನಿಕರ ಜವಾಬ್ದಾರಿ ಕೂಡ ಮುಖ್ಯ. ಮದುವೆ ಹಾಗೂ ಇತ್ಯಾದಿ ಕಾರ್ಯಕ್ರಮದಲ್ಲಿಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸದೆ ಅಂತರ ಪಾಲನೆ, ಕಡ್ಡಾಯವಾಗಿ ಮಾಸ್ಕ್ ಧಧರಿಸಿ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಮಾತನಾಡಿ, ಮಹಿಳಾ ದಿನಾಚರಣೆ ಅಂಗವಾಗಿ ಪ್ರತ್ಯೇಕ ಕೋವಿಡ್ ಲಸಿಕಾ ಬೂತ್ ತೆರೆಯಲಾಗಿದೆ.ಮಹಿಳೆಯರಿಗೆ ಸಾಮಾಜಿಕ ಸಮಾನತೆ ಅವಕಾಶವನ್ನು ನೀಡುವುದು ಇದರ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಸತೀಶ್, ಆರ್.ಸಿ.ಎಚ್ ಅಧಿಕಾರಿ ಡಾ.ಕಾಂತರಾಜ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ,ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ್, ನಗರಸಭೆ ಸದಸ್ಯ ಸೈಯದ್ ಅಕ್ಬರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.