ADVERTISEMENT

140 ಜನ ಗುಣಮುಖ, ಇಬ್ಬರ ಸಾವು

ಸಕ್ರಿಯ ಪ್ರಕರಣಗಳ ಸಂಖ್ಯೆ 1833

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 14:47 IST
Last Updated 21 ಆಗಸ್ಟ್ 2020, 14:47 IST

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ 143 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 5563ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ 140 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರ ಸಂಖ್ಯೆ 3575 ತಲುಪಿದೆ. ಸಾವಿನ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.

1833 ಮಂದಿ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ದಾಖಲಾಗಿದ್ದಾರೆ. ಇದರಲ್ಲಿ 60 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತೀವ್ರ ಜ್ವರದಿಂದ ಬಳಲುತ್ತಿದ್ದ ಹಾಸನ ತಾಲ್ಲೂಕಿನ 35 ವರ್ಷದ ಯುವಕ, 68 ವರ್ಷ ವಯಸ್ಸಿನ ವೃದ್ಧೆ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ನಿಯಮ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಹೊಸದಾಗಿ ಅರಸೀಕೆರೆ 23, ಚನ್ನರಾಯಪಟ್ಟಣ 41, ಆಲೂರು 10, ಹಾಸನ 41, ಹೊಳೆನರಸೀಪುರ 2, ಅರಕಲಗೂಡು 10, ಬೇಲೂರು ತಾಲ್ಲೂಕಿನ 15 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.