ADVERTISEMENT

ಹಾಸನ ಜಿಲ್ಲೆಯಲ್ಲಿ 157 ಮಂದಿಗೆ ಸೋಂಕು, ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 15:52 IST
Last Updated 14 ಆಗಸ್ಟ್ 2020, 15:52 IST
   

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 157 ಜನರಿಗೆ ಕೋವಿಡ್‌-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4272ಕ್ಕೆ
ಏರಿಕೆಯಾಗಿದೆ. ಇಬ್ಬರ ಸಾವಿನೊಂದಿಗೆ ಮೃತರ ಸಂಖ್ಯೆ 120ಕ್ಕೆ ಏರಿಕೆಯಾಗಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ 80 ವರ್ಷದ ವೃದ್ಧೆ, ಹೊಳೆನರಸೀಪುರ ತಾಲ್ಲೂಕಿನ 78 ವರ್ಷದ ಪುರುಷ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದ್ದಾರೆ.

ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹೋಂ ಐಸೋಲೇಷನ್‌ ನಲ್ಲಿ 1823 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 2329 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 50 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ADVERTISEMENT

ಹೊಸದಾಗಿ ಅರಸೀಕೆರೆ 27, ಚನ್ನರಾಯಪಟ್ಟಣ 32, ಹಾಸನ 47, ಹೊಳೆನರಸೀಪುರ 24, ಅರಕಲಗೂಡು 10, ಬೇಲೂರು 15, ಸಕಲೇಶಪುರ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.