ADVERTISEMENT

16 ಕಾಲು ಮಂಟಪ ಸ್ಥಳಾಂತರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2013, 7:02 IST
Last Updated 26 ಏಪ್ರಿಲ್ 2013, 7:02 IST

ಜಾವಗಲ್: ಇತಿಹಾಸ ಪ್ರಸಿದ್ದ ಲಕ್ಷ್ಮೀನರಸಿಂಹಸ್ವಾಮಿ ದೇಗುಲದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರಾಚ್ಯವಸ್ತು ಮತ್ತು ಪುರಾತತ್ವ ಇಲಾಖೆಯ ಆಯುಕ್ತ ಪಿ.ಎಸ್.ವಸ್ತ್ರದ್ ತಿಳಿಸಿದರು.

ಪಟ್ಟಣದ ದೇವಾಲಯಕ್ಕೆ ಬುಧವಾರ ಭೇಟಿ ನೀಡಿ ಸಂರಕ್ಷಣೆ ಕಾಮಗಾರಿ ವೀಕ್ಷಿಸಿ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದರು. 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳ ಲಾಗಿದೆ. ದೇಗುಲದ ಪ್ರಾಂಗಣದಲ್ಲಿ ಇರುವ ಮಹಾಲಕ್ಷ್ಮಿ ದೇವಿ ಗರ್ಭಗುಡಿ, ಗೋಪುರ, ಪಾಕ ಶಾಲೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗು ವುದು ಎಂದು ತಿಳಿಸಿದರು.

16 ಕಾಲು ಮಂಟಪದ ಸ್ಥಳಾಂತರ, ದೇಗುಲದ ಸುತ್ತಲೂ ಉದ್ಯಾನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಎಂಜಿನಿಯರ್‌ಗೆ ಸೂಚಿಸಿದರು. 

ಎಂಜಿನಿಯರ್ ಮಾಳಾಪುರ್, ರಫೀಕ್, ಗುತ್ತಿಗೆದಾರ ವಿಜಯ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹ ಸ್ವಾಮಿ, ಶ್ರೀಕಂಠಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.