ADVERTISEMENT

16ರಿಂದ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿ

ರಾಜ್ಯ ನೇಕಾರ ಯುವ ಬ್ರಿಗೇಡ್‌ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 13:54 IST
Last Updated 11 ಫೆಬ್ರುವರಿ 2019, 13:54 IST
ಜಿ.ಎಸ್.ದಯಾನಂದ್
ಜಿ.ಎಸ್.ದಯಾನಂದ್   

ಹಾಸನ : ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ.16 ಮತ್ತು 17ರಂದು ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ರಾಜ್ಯ ನೇಕಾರ ಯುವ ಬ್ರಿಗೇಡ್ ಅಧ್ಯಕ್ಷ ಜಿ.ಎಸ್.ದಯಾನಂದ್ ಹೇಳಿದರು.

ಯುವ ಬ್ರಿಗೇಡ್ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು, ನೇಕಾರ ಸಮುದಾಯದ ಸ್ವಾಮೀಜಿ ಸಾನಿಧ್ಯ ವಹಿಸುವರು. ಭಾರತ ಹಾಕಿ ತಂಡದ ಮಾಜಿ ನಾಯಕ ಅರ್ಜುನ್ ಹಾಲಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಅಂತರರಾಷ್ಟ್ರೀಯ ಬಿಲಿಯರ್ಡ್‌ ಚಾಂಪಿಯನ್ ಉಮಾದೇವಿ, ಸಚಿವ ಎಚ್.ಡಿ.ರೇವಣ್ಣ, ಎ.ಮಂಜು, ಉಮಾಶ್ರೀ, ಶಾಸಕ ಸಿ.ಟಿ.ರವಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜೇಂದ್ರ, ಪ್ರಜ್ವಲ್ ರೇವಣ್ಣ , ಮಂಜು ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಂಟು ಓವರ್‌ಗಳ ಪಂದ್ಯದಲ್ಲಿ ಗೋವಾ, ಮಹಾರಾಷ್ಟ್ರ, ಆಂಧ್ರ ಪ್ರದೇಶದ ತಂಡಗಳು ಭಾಗವಹಿಸಲಿದ್ದು, ₹ 3,500 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಪ್ರಥಮ ಬಹುಮಾನ ₹ 50 ಸಾವಿರ, ದ್ವಿತೀಯ ₹ 25 ಸಾವಿರ ಹಾಗೂ ತೃತೀಯ ಬಹುಮಾನ ₹ 10 ಸಾವಿರ ನಗದು ಜತೆಗೆ ಟ್ರೋಫಿ ನೀಡಲಾಗುವುದು. ಪಂದ್ಯಾವಳಿಯಲ್ಲಿ ಸುಮಾರು 30ಕ್ಕೂ ಹೆಚ್ಚು ತಂಡಗಳು ಪಾಲ್ಗೊಳ್ಳಲಿದ್ದು, ಆಟಗಾರರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ADVERTISEMENT

ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಯತೀಶ್, ಸದಸ್ಯ ಸಾಗರ್, ಚೇತನ್, ಪ್ರವೀಣ್, ಶ್ರೀನಿಧಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.