ADVERTISEMENT

ಹಾಸನ: 244 ಪೊಲೀಸರು ಕೋವಿಡ್‌ನಿಂದ ಗುಣಮುಖ

ಹೊಸದಾಗಿ 395 ಕೋವಿಡ್‌ ಪ್ರಕರಣ, 693 ಮಂದಿ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 15:30 IST
Last Updated 15 ಅಕ್ಟೋಬರ್ 2020, 15:30 IST

ಹಾಸನ: ಜಿಲ್ಲೆಯಲ್ಲಿ ಈವರೆಗೆ 296 ಪೊಲೀಸರಿಗೆ ಕೋವಿಡ್‌ 19 ತಗುಲಿದ್ದು, 244 ಮಂದಿ ಗುಣಮುಖರಾಗಿದ್ದಾರೆ. 52 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್ ಗೌಡ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1633 ಪೊಲೀಸ್‌ ಕುಟುಂಬಗಳಿದ್ದು, ಈ ಪೈಕಿ 34 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಎಲ್ಲರೂ ಗುಣಮುಖರಾಗಿದ್ದಾರೆ ಎಂದರು.

ಕೊರೊನಾ ಸೋಂಕು ಹಾಗೂ ಸಾವಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸಾಮೂಹಿಕವಾಗಿ ತಪಾಸಣೆಗೆ ಒಳಪಡಿಸಲಾಗಿದೆ. ಇದರಲ್ಲಿ 26 ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡರೆ, ಜಿಲ್ಲಾ ಪಂಚಾಯಿತಿ 20 ಸಿಬ್ಬಂದಿಗೆ ಪಾಸಿಟಿವ್‌ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ADVERTISEMENT

ಜಿಲ್ಲೆಯಲ್ಲಿ ಹೊಸದಾಗಿ ಗುರುವಾರ 395 ಕೋವಿಡ್‌ ಪ್ರರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 22, 513 ಕ್ಕೆ ಏರಿದೆ. ಸೋಂಕಿತ ಮೂರು ಮಂದಿ ಮೃತಪಟ್ಟಿದ್ದು, ಇದುವರೆಗೆ ಸಾವಿಗೀಡಾದವರ ಸಂಖ್ಯೆ 388ಕ್ಕೆ ಏರಿದೆ.

693 ಮಂದಿ ಗುಣಮುಖರಾಗಿದ್ದು, ಒಟ್ಟಾರೆ 18,575 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 3550 ಸೋಂಕಿತರು ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರ ಮತ್ತು ಹೋಂ ಐಸೋಲೋಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 54 ಮಂದಿ ದಾಖಲಾಗಿದ್ದಾರೆ.

ಹೊಸದಾಗಿ ಅರಸೀಕೆರೆಯಲ್ಲಿ 58 , ಚನ್ನರಾಯಪಟ್ಟಣ 78 ಆಲೂರು 06, ಹಾಸನ 113, ಹೊಳೆನರಸೀಪುರ 49, ಅರಕಲಗೂಡು 11, ಬೇಲೂರು 69 ಹಾಗೂ ಸಕಲೇಶಪುರದಲ್ಲಿ 9 ಮಂದಿಗೆ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.