ADVERTISEMENT

ಕೋವಿಡ್‌ನಿಂದ 256 ಜನ ಗುಣಮುಖ

112 ಮಂದಿಗೆ ಕೊರೊನಾ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 2:58 IST
Last Updated 28 ಅಕ್ಟೋಬರ್ 2020, 2:58 IST

ಹಾಸನ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಗುಣಮುಖರ ಸಂಖ್ಯೆಯು ಹೆಚ್ಚುತ್ತಿದೆ. ಮಂಗಳವಾರ ಒಂದೇ ದಿನ 256 ಜನ ಗುಣಮುಖರಾಗಿದ್ದು, ಈವರೆಗೆ 22,613 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಹೊಸದಾಗಿ 112 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 24,360ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ ಯಾವುದೇ ಮಂಗಳವಾರ ಯಾವುದೇ ಸಾವು ಆಗಿಲ್ಲ, ಈವರೆಗೆ ಕೋವಿಡ್‌ನಿಂದ 417 ಜನರು ಮೃತರಾಗಿದ್ದಾರೆ.

ಜಿಲ್ಲೆಯಲ್ಲಿ 1,330 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 41 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಹೊಸದಾಗಿ ಪತ್ತೆಯಾದ 112 ಕೊರೊನಾ ಸೋಂಕು ಪ್ರಕರಣಗಳಲ್ಲಿ ಆಲೂರು 5, ಅರಕಲಗೂಡು 7, ಅರಸೀಕೆರೆ 2, ಬೇಲೂರು 3, ಚನ್ನರಾಯಪಟ್ಟಣ 22, ಹಾಸನ 61, ಹೊಳೆನರಸೀಪುರ 5, ಸಕಲೇಶಪುರ 5 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.