ADVERTISEMENT

ಹಾಸನ: 273 ಜನರಿಗೆ ಕೊರೊನಾ ಸೋಂಕು ದೃಢ

ಮತ್ತೆ ನಾಲ್ವರು ಸಾವು, 263 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 16:47 IST
Last Updated 9 ಸೆಪ್ಟೆಂಬರ್ 2020, 16:47 IST
   

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 273 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 10,660ಕ್ಕೆ ಏರಿಕೆಯಾಗಿದೆ. ಬುಧವಾರ ಬಿಡುಗಡೆಯಾದ 263 ಜನ ಸೇರಿದಂತೆ ಈವರೆಗೆ 7505 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 2923 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹೋಂ ಐಸೊಲೇಷನ್‌ನಲ್ಲಿ ಹಾಗೂ ತೀವ್ರ ನಿಗಾ ಘಟಕದಲ್ಲಿ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ 4 ಜನ ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 232ಕ್ಕೆ ಏರಿಕೆಯಾಗಿದೆ. ಜ್ವರದಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 72 ವರ್ಷದ ವೃದ್ಧ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ವೃದ್ಧೆ, ಬೇಲೂರು ತಾಲ್ಲೂಕಿನ 62 ವರ್ಷದ ವೃದ್ಧ ಶೀತ ಮತ್ತು ಜ್ವರದಿಂದ ಬಳಲುತ್ತಿದ್ದರು. ಅರಸೀಕೆರೆ ತಾಲ್ಲೂಕಿನ 70 ವರ್ಷದ ವೃದ್ಧ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ADVERTISEMENT

ಬುಧವಾರ ಪತ್ತೆಯಾದ 273 ಕೊರೊನಾ ಸೋಂಕು ಪ್ರಕರಣಗಳಲ್ಲಿ 35 ಮಂದಿ ಅರಸೀಕೆರೆ, 25 ಮಂದಿ ಚನ್ನರಾಯಪಟ್ಟಣ, ಆಲೂರು ತಾಲ್ಲೂಕಿನ 9 ಜನ, 113 ಮಂದಿ ಹಾಸನ, 17 ಜನ ಹೊಳೆನರಸೀಪುರ, 45 ಜನ ಅರಕಲಗೂಡು, ಬೇಲೂರು ತಾಲ್ಲೂಕಿನ 13 ಜನ, ಸಕಲೇಶಪುರ ತಾಲ್ಲೂಕಿನ 13 ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.