ADVERTISEMENT

ಮತ್ತೆ 3 ಸಾವು, 295 ಜನ ಗುಣಮುಖ

273 ಜನರಿಗೆ ಕೊರೊನಾ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 15:08 IST
Last Updated 12 ಅಕ್ಟೋಬರ್ 2020, 15:08 IST

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 273 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 21,589ಕ್ಕೆ ಏರಿಕೆಯಾಗಿದೆ. ‌ಸೋಂಕಿನಿಂದ ಮತ್ತೆ ಮೂವರು ಮೃತರಾಗಿದ್ದು, ಇದರೊಂದಿಗೆ ಸಾವಿಗೀಡಾದವರ ಸಂಖ್ಯೆ 378ಕ್ಕೆ ಏರಿಕೆಯಾಗಿದೆ.

ಉಸಿರಾಟ ತೊಂದರೆ ಹಾಗೂ ತೀವ್ರ ಜ್ವರದಿಂದ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅರಸೀಕೆರೆ ತಾಲ್ಲೂಕಿನ ಇಬ್ಬರು ಹಾಗೂ ಚನ್ನರಾಯಪಟ್ಟಣದ ಒಬ್ಬ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸಿಲ್ಲ. 4,165 ಸೋಂಕಿತರು ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರ ಹಾಗೂ ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಬಿಡುಗಡೆಯಾದ 295 ಜನ ಸೇರಿ ಈವರೆಗೆ 17,046 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಹೊಸದಾಗಿ ಅರಸೀಕೆರೆ 16, ಚನ್ನರಾಯಪಟ್ಟಣ 52, ಆಲೂರು 10, ಹಾಸನ 128, ಹೊಳೆನರಸೀಪುರ 17, ಅರಕಲಗೂಡು 30, ಬೇಲೂರು 5, ಸಕಲೇಶಪುರ 10 ಮಂದಿ ಹಾಗೂ ಇತರ ಜಿಲ್ಲೆಯ 5 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.