ADVERTISEMENT

‘30 ಗ್ರಾ.ಪಂ ಜೆಡಿಎಸ್ ತೆಕ್ಕೆಗೆ’

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 2:23 IST
Last Updated 1 ಜನವರಿ 2021, 2:23 IST
ಶಿವಲಿಂಗೇಗೌಡ
ಶಿವಲಿಂಗೇಗೌಡ   

ಅರಸೀಕೆರೆ: ‘ತಾಲ್ಲೂಕಿನಲ್ಲಿ 35 ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 30 ಪಂಚಾಯಿತಿಗಳು ಜೆಡಿಎಸ್ ಬೆಂಬಲಿತರು ಗೆಲ್ಲಿಸುವುದರಲ್ಲಿ ಯಶಸ್ಸು ಸಾಧಿಸಿದ್ದೇವೆ’ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

‘ತಾಲ್ಲೂಕಿನ ಒಟ್ಟು 43 ಗ್ರಾಮ ಪಂಚಾಯಿತಿಗಳಲ್ಲಿ 35 ಅರಸೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುತ್ತವೆ. ಇವುಗಳಲ್ಲಿ ಸುಮಾರು 30 ಗ್ರಾಮ ಪಂಚಾಯಿತಿಗಳನ್ನು ಈ ಬಾರಿ ಜೆಡಿಎಸ್ ತೆಕ್ಕೆಗೆ ತೆಗೆದುಕೊಂಡು ಜೆಡಿಎಸ್ ಸ್ಪಷ್ಟ ಬಹುಮತ ಪಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ 22 ಗ್ರಾಮ ಪಂಚಾಯಿತಿಗಳಲ್ಲಿ ಜಯ ಸಾಧಿಸಿತ್ತು. ಈ ಬಾರಿ ನಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿ 523 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 389 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ’ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

'ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಕೆಲವೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮಬಲ ಹೊಂದಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆ ಅತಂತ್ರ ಸ್ಥಿತಿಯಲ್ಲಿರುವ ಗ್ರಾಮ ಪಂಚಾಯಿತಿಗಳೂ ಸದ್ಯದಲ್ಲೇ ಜೆಡಿಎಸ್ ತೆಕ್ಕೆಗೆ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ತಾಲ್ಲೂಕಿನಲ್ಲಿ ಕೇವಲ ಜೆಡಿಎಸ್ ಮತ್ತು ಕಾಂಗ್ರೆಸ್ ಮಾತ್ರ ಪೈಪೋಟಿ ಇತ್ತು’ ಎಂದರು.

ADVERTISEMENT

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಿಲ್ಲಾ ಪಂಚಾಯಿತಿ ಸದಸ್ಯ ಬಿಳಿಚೌಡಯ್ಯ, ಜೆಡಿಎಸ್ ಮುಖಂಡರಾದ ಧರ್ಮಶೇಖರ್, ಹುಚ್ಚೇಗೌಡ, ಗಂಗಾಧರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.