ADVERTISEMENT

ಹಾಸನ: 31 ಮಂದಿಗೆ ಕೊರೊನಾ ಪಾಸಿಟಿವ್‌, ಕೋವಿಡ್‌ಗೆ ಮತ್ತೊಂದು ಸಾವು

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 15:35 IST
Last Updated 16 ಜುಲೈ 2020, 15:35 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹಾಸನ: ಜಿಲ್ಲೆಯಲ್ಲಿ ಗುರುವಾರ 31 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿಗೆ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಸನ ತಾಲ್ಲೂಕಿನ 65 ವರ್ಷದ ಮಹಿಳೆಗೆ ಉಸಿರಾಟದ ಸಮಸ್ಯೆ
ಕಾಣಿಸಿಕೊಂಡಿತ್ತು. ಮಧುಮೇಹ, ರಕ್ತದೊತ್ತಡ, ಕಿಡ್ನಿ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಎರಡು ಬಾರಿ ಡಯಾಲಿಸಿಸ್‌ ನಡೆದಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ಕುಮಾರ್‌ ತಿಳಿಸಿದರು.

ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ಆಲೂರು ತಾಲ್ಲೂಕಿನ 1, ಅರಸೀಕೆರೆ 2, ಬೇಲೂರು 1, ಚನ್ನರಾಯಪಟ್ಟಣ 3, ಹಾಸನ 16, ಸಕಲೇಶಪುರ 6 ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿದ್ದಾರೆ. ಮೂವರು ಆರೋಗ್ಯ ಕೇಂದ್ರದ ಸಹಾಯಕರು, ಪೊಲೀಸ್‌ ಕಾನ್‌ಸ್ಟೆಬಲ್‌, ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿದವರು ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ಕೋವಿಡ್‌ ಬಂದಿದೆ.

ADVERTISEMENT

ಈ ವರೆಗೆ 771 ಪ್ರಕರಣಗಳು ದೃಢಪಟ್ಟಿದ್ದು, 515 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 232 ಸಕ್ರಿಯ ಪ್ರಕರಣಗಳಿದ್ದು, 12 ಜನರು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.