ADVERTISEMENT

ಹಾಸನ: 314 ಮಂದಿ ಕೊರೊನಾದಿಂದ ಗುಣಮುಖ, ಇಬ್ಬರ ಸಾವು

439 ಜನರಿಗೆ ಕೊರೊನಾ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 16:19 IST
Last Updated 8 ಅಕ್ಟೋಬರ್ 2020, 16:19 IST

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 439 ಕೋವಿಡ್‌ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಸೋಂಕು ದೃಢಪಟ್ಟವರ ಸಂಖ್ಯೆ 19,880ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 366ಕ್ಕೆ ಏರಿಕೆಯಾಗಿದೆ. ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಾಸನ ಹಾಗೂ ಸಕಲೇಶಪುರ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.

4,069 ಸೋಂಕಿತರು ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಬಿಡುಗಡೆಯಾದ 314 ಜನ ಸೇರಿ ಈವರೆಗೆ 15,445 ಮಂದಿ ಚೇತರಿಸಿಕೊಂಡಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 43 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಹೊಸದಾಗಿ ಅರಸೀಕೆರೆ 21, ಚನ್ನರಾಯಪಟ್ಟಣ 53, ಆಲೂರು 10, ಹಾಸನ 240, ಹೊಳೆನರಸೀಪುರ 32, ಅರಕಲಗೂಡು 33, ಬೇಲೂರು 36, ಸಕಲೇಶಪುರ 13 ಮಂದಿ ಹಾಗೂ ಇತರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.