ADVERTISEMENT

ಒಂದೇ ದಿನ 332 ಜನ ಗುಣಮುಖ

220 ಜನರಿಗೆ ಸೋಂಕು ದೃಢ, ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 14:35 IST
Last Updated 14 ಸೆಪ್ಟೆಂಬರ್ 2020, 14:35 IST

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಗುಣಮುಖ ಪ್ರಮಾಣವೂ ಹೆಚ್ಚಳವಾಗುತ್ತಿದೆ. ಸೋಮವಾರ ಒಂದೇ ದಿನ 332 ಜನರು ಚೇತರಿಸಿಕೊಂಡಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 9062 ತಲುಪಿದೆ.

ಹೊಸದಾಗಿ 220 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,220ಕ್ಕೆ ಏರಿಕೆಯಾಗಿದೆ. 2909
ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಜಿಲ್ಲಾ ಕೋವಿಡ್‌ ಆಸ್ಪತ್ರೆ, ಹೋಂ ಐಸೋಲೇಷನ್‌ ಮತ್ತು ಕೋವಿಡ್‌ ಕೇರ್‌
ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಕಲೇಶಪುರ ಹಾಗೂ ಅರಸೀಕೆರೆ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ
ಸ್ಪಂದಿಸಲಿಲ್ಲ. ಮೃತರ ಸಂಖ್ಯೆ 249ಕ್ಕೆ ಏರಿಕೆಯಾಗಿದೆ.

ADVERTISEMENT

ಹೊಸದಾಗಿ ಆಲೂರು 10 ಜನ, ಅರಕಲಗೂಡು 6 , ಅರಸೀಕೆರೆ 24, ಬೇಲೂರು 13, ಚನ್ನರಾಯಪಟ್ಟಣ 30,
ಹಾಸನ 119 , ಹೊಳೆನರಸೀಪುರ 6, ಸಕಲೇಶಪುರ 13 ಜನರಿಗೆ ಸೋಂಕು ದೃಢಪಟ್ಟಿದೆ. ನಿತ್ಯ 1, 800
ಕೋವಿಡ್‌ ಪರೀಕ್ಷೆ ನಡೆಸುತ್ತಿದ್ದು, ಈಗ 2,500 ಗುರಿ ನೀಡಲಾಗಿದೆ. ಪ್ರಾಥಮಿಕ ಸಂಪರ್ಕಿತರನ್ನು ಹೆಚ್ಚು ಪತ್ತೆ ಮಾಡಿ
ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್
ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.