ADVERTISEMENT

ಅರಸೀಕೆರೆ| ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 34 ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2022, 12:11 IST
Last Updated 24 ಮಾರ್ಚ್ 2022, 12:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಅರಸೀಕೆರೆ: ತಾಲ್ಲೂಕಿನ ನಾರಾಯಣ ಗಟ್ಟಿಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 34 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸುವ ವೇಳೆ ಮೂರನೇ ತರಗತಿ ವಿದ್ಯಾರ್ಥಿಗೆ ಹಲ್ಲಿ ಸಿಕ್ಕಿದೆ. ತಕ್ಷಣ ಶಿಕ್ಷಕರು ಎಲ್ಲಾ ಮಕ್ಕಳನ್ನು ಪಟ್ಟಣದ ಜಯರಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿದರು. ‘ಎಲ್ಲರಿಗೂ ಚಿಕಿತ್ಸೆ ನೀಡಿದ್ದು, ಆರೋಗ್ಯವಾಗಿದ್ದಾರೆ’ ಎಂದು ವೈದ್ಯರು ತಿಳಿಸಿದರು.

‘ಅಡುಗೆ ಸಿಬ್ಬಂದಿ ಬೇಜವಾಬ್ದಾರಿಯಿಂದ ಈ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮಕ್ಕಳು ಆರೋಗ್ಯದಿಂದ ಇದ್ದಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.