ADVERTISEMENT

ಹಾಸನ: 35 ಆಮ್ಲಜನಕ ಸಾಂದ್ರಕ ಕೊಡುಗೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 14:01 IST
Last Updated 2 ಜೂನ್ 2021, 14:01 IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ 35 ಆಮ್ಲಜನಕ ಸಾಂದ್ರಕಗಳನ್ನು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯಗೆ ಹಸ್ತಾಂತರಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ 35 ಆಮ್ಲಜನಕ ಸಾಂದ್ರಕಗಳನ್ನು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯಗೆ ಹಸ್ತಾಂತರಿಸಲಾಯಿತು.   

ಹಾಸನ:ಕೊರೊನಾ ಸೋಂಕಿತರ ಅನುಕೂಲಕ್ಕಾಗಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ 35 ಆಮ್ಲಜನಕ ಸಾಂದ್ರಕಗಳನ್ನು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರಿಗೆ ಹಸ್ತಾಂತರಿಸಲಾಯಿತು.

ಸಚಿವ ಕೆ. ಗೋಪಾಲಯ್ಯ ಮಾತನಾಡಿ, ನಗರದ ಮಂಜುನಾಥೇಶ್ವರ ಆಸ್ಪತ್ರೆಯನ್ನು ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತನೆ ಮಾಡಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 35 ಆಮ್ಲಜನಕ ಸಾಂದಕ್ರಕಗಳನ್ನು
ನೀಡಲಾಗಿದೆ. ಆಹಾರ, ಶಿಕ್ಷಣ ನೀಡುವ ಮೂಲಕ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗಡೆ ಅವರು ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಮಂಜುನಾಥ್ ಮಾತನಾಡಿ, ರೋಗಿಗಳ ಅನುಕೂಲಕ್ಕಾಗಿ ಉಜಿರೆ, ಧಾರವಾಡ ಮತ್ತು ಮೈಸೂರಿನಲ್ಲಿ ಸಂಸ್ಥೆಯ ವತಿಯಿಂದ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. 300 ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, 10 ಸಾವಿರ ಮಂದಿ ಪ್ರಯೋಜನಾ ಪಡೆದುಕೊಂಡಿದ್ದಾರೆ. ಆಹಾರ ಕಿಟ್‍ಗಳನ್ನು ನೀಡಲಾಗಿದೆ ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಆರ್. ಗಿರೀಶ್, ಪೊಲೀಸ್ ವರಿಷ್ಠಾಧಿಕಾರಿ ಆರ್‍.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ ಪರಮೇಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ರೇವತಿ ಸುಧಾಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.