ADVERTISEMENT

36 ಗ್ರಾ.ಪಂ: ಜೆಡಿಎಸ್ ಬೆಂಬಲಿತರ ತೆಕ್ಕೆಗೆ: ಶಾಸಕ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 2:23 IST
Last Updated 1 ಜನವರಿ 2021, 2:23 IST
ಬಾಲಕೃಷ್ಣ
ಬಾಲಕೃಷ್ಣ   

ಚನ್ನರಾಯಪಟ್ಟಣ: ತಾಲ್ಲೂಕಿನ 40 ಗ್ರಾಮ ಪಂಚಾಯಿತಿಗಳ ಪೈಕಿ 36 ಪಂಚಾಯಿತಿಗಳಲ್ಲಿ ಜೆಡಿಎಸ್ ಬೆಂಬಲಿತರಿಗೆ ಬಹುಮತ ಲಭಿಸಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ಜನಿವಾರ ಮತ್ತು ಮತಿಘಟ್ಟ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತರು ಹೆಚ್ಚು ಸಂಖ್ಯೆಯಲ್ಲಿ ಆಯ್ಕೆಯಾಗಿಲ್ಲ. ಬಾಳಗಂಚಿ ಮತ್ತು ಸಂತೇಶಿವರ ಪಂಚಾಯಿತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಬೆಂಬಲಿತರ ಸಂಖ್ಯೆಯಲ್ಲಿ ಸಮಬಲ ಇದೆ. 40 ಗ್ರಾಮ ಪಂಚಾಯಿತಿಯ 609 ಸ್ಥಾನಗಳ ಪೈಕಿ ಶೇ 80ರಷ್ಟು ಜೆಡಿಎಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ನಿರೀಕ್ಷೆಗಿಂತ ಹೆಚ್ಚು ಸ್ಥಾನ ಲಭಿಸಿದೆ ಎಂದು ಹೇಳಿದರು.

5 ವರ್ಷದ ಹಿಂದೆ ನಡೆದಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯಲ್ಲಿ ಯಲ್ಲಿ ಜೆಡಿಎಸ್ ಬೆಂಬಲಿತರು ಉತ್ತಮ ಸಾಧನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿಗೆ ಮತದಾರರು ಪೂರಕವಾಗಿ ಸ್ಪಂದಿಸಿದ್ದಾರೆ. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಇನ್ನಷ್ಟು ಹುಮ್ಮಸು, ಉತ್ಸಾಹದಿಂದ ಕೆಲಸ ಮಾಡಲಾಗುವುದು ಎಂದರು.

ADVERTISEMENT

ಮುಖಂಡರಾದ ಬಿ.ಎಚ್. ಶಿವಣ್ಣ, ಸುರೇಶ್, ಸಿ.ಎಸ್. ಸಾಗರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.