ADVERTISEMENT

ಭಾರೀ ಮಳೆ | ಹಳಿ ಮೇಲೆ ಮಣ್ಣು ಕುಸಿದು ಬೆಂಗಳೂರು–ಮಂಗಳೂರು ರೈಲು ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 20 ಜುಲೈ 2019, 10:32 IST
Last Updated 20 ಜುಲೈ 2019, 10:32 IST
   

ಹಾಸನ, ಸಕಲೇಶಪುರ:ತಾಲೂಕಿನ ಪಶ್ಚಿಮಘಟ್ಟ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮಳೆಗೆ ಬೆಂಗಳೂರು-ಮಂಗಳೂರು ನಡುವಿನ 86/100 ಮೈಲಿನಲ್ಲಿ ಗುಡ್ಡ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶನಿವಾರ, ಭಾನುವಾರ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ರೈಲು ಹಳಿ ತುಂಬೆಲ್ಲಾ ನೀರು ತುಂಬಿರುವುದು ಒಂದೆಡೆಯಾದರೆ, ಹಳಿ ಅಕ್ಕಪಕ್ಕದ ಗುಡ್ಡ ಯಾವಾಗ ಬೇಕಾದರೂ ಹಳಿ ಮೇಲೆ ಕುಸಿಯಬಹುದು ಎನ್ನುವ ಆತಂಕ ಎದುರಾಗಿದೆ.

ADVERTISEMENT
ಹಳಿ ಮೇಲೆ ಮಣ್ಣು ಕುಸಿದಿರುವ ಸ್ಥಳದಲ್ಲಿ ಮತ್ತೆ ಕುಸಿಯಬಹುದಾದ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮಳೆ ಹೀಗೇ ಮುಂದುವರಿದರೆ ಕಲ್ಲು ಬಂಡೆ ಮತ್ತು ಗುಡ್ಡ ರೈಲ್ವೆ ಹಳಿಯ ಮೇಲೆ ಜಾರುವ ಸಂಭವವಿರುವುದರಿಂದ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಈಗಲೂ ಸಣ್ಣಪುಟ್ಟ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.