ADVERTISEMENT

ಹಾಸನ: ಒಂದೇ ದಿನ 467 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 13:39 IST
Last Updated 21 ಏಪ್ರಿಲ್ 2021, 13:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹಾಸನ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 467 ಕೋವಿಡ್‌ 19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ‌

ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಇದರೊಂದಿಗೆ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 508 ತಲುಪಿದೆ. 2524 ಸಕ್ರಿಯ ಪ್ರಕರಣಗಳ ಪೈಕಿ 24 ಮಂದಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಒಟ್ಟು 30111 ಮಂದಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ.

ಹೊಸದಾಗಿ ಆಲೂರು ತಾಲ್ಲೂಕಿನಲ್ಲಿ 25, ಅರಕಲಗೂಡು 23, ಅರಸೀಕೆರೆ 38, ಬೇಲೂರು 37, ಚನ್ನರಾಯಪಟ್ಟಣ 83, ಹಾಸನ 169, ಹೊಳೆನರಸೀಪುರ 60, ಸಕಲೇಶಪುರ 25, ಇತರೆ ಜಿಲ್ಲೆಯ ಏಳು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.