ADVERTISEMENT

ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿ; ಸೋಮಣ್ಣ

ಅರಸೀಕೆರೆ: ಮಾಡಾಳು ಗ್ರಾಮದಲ್ಲಿ ಬೂತ್‌ಮಟ್ಟದ ಸಶಸ್ತ್ರೀಕರಣ ಕಾರ್ಯಾಗಾರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2018, 9:15 IST
Last Updated 11 ಜನವರಿ 2018, 9:15 IST
ಅರಸೀಕೆರೆ ತಾಲ್ಲೂಕು ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ಸ್ವರ್ಣಗೌರಿ ಸಮುದಾಯ ಭವನದಲ್ಲಿ ಹೋಬಳಿಮಟ್ಟದ ಶಕ್ತಿ ಕೇಂದ್ರ ಆಯೋಜಿಸಿದ್ದ ಬೂತ್‌ಮಟ್ಟದ ಸಶಸ್ತ್ರೀಕರಣ ಕಾರ್ಯಾಗಾರವನ್ನು ಬಿಜೆಪಿ ಹಾಸನ ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣ ಉದ್ಘಾಟಿಸಿದರು
ಅರಸೀಕೆರೆ ತಾಲ್ಲೂಕು ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ಸ್ವರ್ಣಗೌರಿ ಸಮುದಾಯ ಭವನದಲ್ಲಿ ಹೋಬಳಿಮಟ್ಟದ ಶಕ್ತಿ ಕೇಂದ್ರ ಆಯೋಜಿಸಿದ್ದ ಬೂತ್‌ಮಟ್ಟದ ಸಶಸ್ತ್ರೀಕರಣ ಕಾರ್ಯಾಗಾರವನ್ನು ಬಿಜೆಪಿ ಹಾಸನ ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣ ಉದ್ಘಾಟಿಸಿದರು   

ಅರಸೀಕೆರೆ: ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮುಖಂಡರು ಹಾಗೂ ಕಾರ್ಯಕರ್ತರು ತಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬದಿಗಿರಿಸಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ಹಾಸನ ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣ ತಿಳಿಸಿದರು.

ತಾಲ್ಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ಸ್ವರ್ಣಗೌರಿ ಸಮುದಾಯ ಭವನದಲ್ಲಿ ಹೋಬಳಿಮಟ್ಟದ ಶಕ್ತಿ ಕೇಂದ್ರ ಆಯೋಜಿಸಿದ್ದ ಬೂತ್‌ಮಟ್ಟದ ಸಶಸ್ತ್ರೀಕರಣ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಜೆಡಿಎಸ್‌ ಭದ್ರಕೋಟೆ ಎನಿಸಿರುವ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಯನ್ನು ನನಗೆ ವಹಿಸಲಾಗಿದೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ರಾಷ್ಟ್ರೀಯ ಹಾಗೂ ರಾಜ್ಯಾಧ್ಯಕ್ಷರ ಸೂಚನೆಯಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು. ಅಭ್ಯರ್ಥಿ ಯಾರೇ ಆಗಲಿ ಪಕ್ಷದವರು ಎನ್ನುವುದನ್ನು ಮರೆಯಬಾರದು. ಗೆಲುವಿಗೆ ಈಗಿನಿಂದಲೇ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ADVERTISEMENT

ನಾಲ್ಕು ಮುಕ್ಕಾಲು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ನಿದ್ರಾವಸ್ಥೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸರ್ಕಾರದ ಹಣದಿಂದ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳನ್ನು ವೆಚ್ಚ ಮಾಡುತ್ತಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ಯೋಜನೆಗಳಿಗೆ ಯಾವುದೇ ಹಣ ಬಿಡುಗಡೆ ಮಾಡದೇ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಜನರ ಕಣ್ಣಿಗೆ ಮಂಕು ಬೂದಿ ಎರಚುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಕೆ.ಪಿ.ಪ್ರಭುಕುಮಾರ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯೋಗಾ ರಮೇಶ್‌, ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷರಾದ ದುಮ್ಮೇನಹಳ್ಳಿ ಗಂಗಣ್ಣ, ಎಚ್‌.ಕೆ. ಸತೀಶ್‌, ತಾ.ಪಂ ಮಾಜಿ ಸದಸ್ಯ ದಿನೇಶ್‌ ಮಾತನಾಡಿದರು.

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರೇಣುಕುಮಾರ್‌, ಜಿಲ್ಲಾ ವಕ್ತಾರ ಎನ್‌.ಡಿ.ಪ್ರಸಾದ್‌, ಬೇಲೂರು ತಾಲ್ಲೂಕು ಘಟಕದ ಅಧ್ಯಕ್ಷ ಕೊರಟಗೆರೆ ಪ್ರಕಾಶ್‌, ಕಟ್ಟಾಯ ಶಿವಕುಮಾರ್‌, ಎಂ.ಸಿ.ನಟರಾಜ್‌, ಮಾಡಾಳು ಗ್ರಾಮ ಪಂಚಾಯತಿ ಸದಸ್ಯ ರಮೇಶ್‌, ತಾಲ್ಲೂಕು ಪಂಚಾಯಿತಿ ಮಾಜಿ
ಸದಸ್ಯ ಲೋಕೇಶ್‌, ಕೆ.ವಿ.ಎನ್‌. ಶಿವು, ಶಕ್ತಿ ಕೇಂದ್ರದ ಅಧ್ಯಕ್ಷ ಗಂಗಾಧರ್‌, ನಗರ ಘಟಕದ ಅಧ್ಯಕ್ಷ ಮನೋಜ್‌ ಕುಮಾರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.