ADVERTISEMENT

ರಾಗಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜನವರಿ 2018, 11:17 IST
Last Updated 24 ಜನವರಿ 2018, 11:17 IST

ಚನ್ನರಾಯಪಟ್ಟಣ: ಕ್ವಿಂಟಲ್‌ ರಾಗಿಗೆ ಕನಿಷ್ಠ ₹ 3–4 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಶಾಸಕ ಸಿ.ಎನ್‌. ಬಾಲಕೃಷ್ಣ ಆಗ್ರಹಿಸಿದರು.

ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಈಚೆಗೆ ಶ್ರೀನಿವಾಸ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ರಾಗಿ ಪ್ರಮುಖ ಬೆಳೆಯಾಗಿದೆ. ಬಿತ್ತನೆಯಿಂದ ಒಕ್ಕಣೆವರೆಗೆ ಸಾಕಷ್ಟು ಹಣ ವ್ಯಯಿಸಲಾಗುತ್ತದೆ. ಈಗ ನಿಗದಿಪಡಿಸಿರುವ ಕ್ವಿಂಟಲ್‌ಗೆ ₹ 2,300 ಬೆಂಬಲ ಬೆಲೆಯಿಂದ ರೈತರಿಗೆ ಅನುಕೂಲವಿಲ್ಲ. ಬೆಲೆ ಹೆಚ್ಚಿಸಬೇಕು ಎಂದರು.

ADVERTISEMENT

ತಾಲ್ಲೂಕಿನಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನದಿಂದ ಕೆರೆ, ಕಟ್ಟೆಗಳಿಗೆ ನೀರು ತುಂಬಿ ಅಂತರ್ಜಲ ಪ್ರಮಾಣ ಹೆಚ್ಚಾಗುತ್ತದೆ. ಇದರಿಂದ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದು ಅವವರು ಆಶಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಆರ್‌. ದೊರೆಸ್ವಾಮಿ, ಮುಖಂಡರಾದ ರಂಗಸ್ವಾಮಿ, ಮಹೇಶ್‌, ಮಂಜುನಾಥ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.