ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 9:11 IST
Last Updated 26 ಜನವರಿ 2018, 9:11 IST

ಹಾಸನ : ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಜ. 26ರಂದು ಬೆಳಿಗ್ಗೆ 8.30ಕ್ಕೆ ಕುವೆಂಪು ನಗರದ ಜನರಲ್ ಕಾರ್ಯಪ್ಪ ಉದ್ಯಾನವನದಲ್ಲಿ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವರು.

ಬೆಳಿಗ್ಗೆ 8.45 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12ಕ್ಕೆ ಅರಕಲಗೂಡಿನಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಕುರಿತು ಸಭೆ ನಡೆಸುವರು.

ಸಂಜೆ 5 ಗಂಟೆಗೆ ಆಲೂರಿನಲ್ಲಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.