ADVERTISEMENT

ರಾಗಿ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 10:08 IST
Last Updated 30 ಜನವರಿ 2018, 10:08 IST
ಬಿ.ಕೆ. ಮಂಜುನಾಥ್
ಬಿ.ಕೆ. ಮಂಜುನಾಥ್   

ಹಾಸನ: ರಾಜ್ಯ ಸರ್ಕಾರ ಕೂಡಲೇ ಎಲ್ಲಾ ಜಿಲ್ಲೆಗಳಲ್ಲೂ ರಾಗಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಬಿಜೆಪಿ ಮುಖಂಡ ಬಿ.ಕೆ.ಮಂಜುನಾಥ್ ಒತ್ತಾಯಿಸಿದರು.

ಬರಗಾಲದ ನಡುವೆಯೂ ಕಷ್ಟಪಟ್ಟು ಬೆಳೆದಿರುವ ರಾಗಿ ಬೆಲೆ ಕುಸಿದ ಪರಿಣಾಮ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ. ಆದರೆ, ಎಲ್ಲೂ ಈವರೆಗೂ ಖರೀದಿ ಕೇಂದ್ರ ತೆರೆಯದೆ ಇರುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ. ತುರ್ತಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಈಗಾಗಲೇ ಹಲವು ರೈತರು ಕ್ವಿಂಟಲ್‌ ರಾಗಿಗೆ ಕೇವಲ ₹ 1500 ರಂತೆ ಮಾರಾಟ ಮಾಡಿ ನಷ್ಟ ಅನುಭವಿಸಿದ್ದಾರೆ. ಸರ್ಕಾರ ನೆಪ ಮಾತ್ರಕ್ಕೆ ರಾಗಿಗೆ ಬೆಂಬಲ ಬೆಲೆ ಘೋಷಿಸಿ ವರ್ತಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೇಂದ್ರ ತೆರೆಯಲು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ADVERTISEMENT

ಕೇಂದ್ರ ಪ್ರಾರಂಭಿಸಿ ರೈತರ ಪಹಣಿ ಪಡೆದು ರಾಗಿ ಖರೀದಿಸಬೇಕು. ಇಲ್ಲದಿದ್ದರೆ ಈಗಾಗಲೇ ರೈತರಿಂದ ಖರೀದಿಸಿರುವ ವರ್ತಕರು ಬೆಂಬಲ ಬೆಲೆಯ ಲಾಭ ಪಡೆದುಕೊಳ್ಳುತ್ತಾರೆ ಎಂದರು.

ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಜೋಳ ಬೆಳೆಯಲಾಗಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ,ಬೆಲೆ ಕುಸಿದು ರೈತರು ಸಂಕಷ್ಟದದಲ್ಲಿದ್ದಾರೆ. ಸರ್ಕಾರ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು, ಇಲ್ಲದಿದ್ದರೆ ಬಿಜೆಪಿ ಪಕ್ಷದ ವತಿಯಿಂದ ಎಪಿಎಂಸಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಶರ್ಮ, ಮುಖಂಡರಾದ ಪ್ರಕಾಶ್, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.