ADVERTISEMENT

ಹಾಸನ: ಜಿಲ್ಲೆಯಲ್ಲಿ 635 ಮಂದಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 16:29 IST
Last Updated 29 ಏಪ್ರಿಲ್ 2021, 16:29 IST

ಹಾಸನ: ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 635 ಕೋವಿಡ್‌ 19 ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಏಳು ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 38,525ಕ್ಕೆ ಏರಿಕೆಯಾಗಿದ್ದು, 31,838 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 6,124 ಸಕ್ರಿಯ ಪ್ರಕರಣಗಳ ಪೈಕಿ 68 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ ಕಾಯಿಲೆಗೆ ಈವರೆಗೆ 563 ಮಂದಿ ಅಸುನೀಗಿದ್ದಾರೆ. ಹಾಸನ ತಾಲ್ಲೂಕಿನಲ್ಲಿ ಅತಿ ಹೆಚ್ಚು ರೋಗಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.‌

ADVERTISEMENT

ಹೊಸದಾಗಿ ಆಲೂರು ತಾಲ್ಲೂಕು 11, ಅರಕಲಗೂಡು 68, ಅರಸೀಕೆರೆ 64, ಬೇಲೂರು 49, ಚನ್ನರಾಯಪಟ್ಟನ 138, ಹಾಸನ 201, ಹೊಳೆನರಸೀಪುರ 47, ಸಕಲೇಶಪುರ 50, ಇತರೆ ಜಿಲ್ಲೆಯ 7 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.