ADVERTISEMENT

836 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 6 ಮೇ 2021, 16:02 IST
Last Updated 6 ಮೇ 2021, 16:02 IST

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆ ಆರ್ಭಟ ತೀವ್ರಗೊಂಡಿದ್ದು, ಗುರುವಾರ 1248 ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆಗೆ ಸ್ಪಂದಿಸದೆ 9 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 48043 ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 11430 ತಲುಪಿದೆ. ಈವರೆಗೆ ಕಾಯಿಲೆಯಿಂದ ಅಸುನೀಗಿದವರ ಸಂಖ್ಯೆ 640. ತೀವ್ರ ನಿಗಾ ಘಟಕದಲ್ಲಿ 96 ಮಂದಿ ಚಿಕಿತ್ಸೆ
ಪಡೆಯುತ್ತಿದ್ದಾರೆ. ಒಟ್ಟು 35973 ಮಂದಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಸೋಂಕಿತರು ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಆಲೂರು ತಾಲ್ಲೂಕಿನ 120, ಅರಕಲಗೂಡು 130, ಅರಸೀಕೆರೆ 90, ಬೇಲೂರು
171, ಚನ್ನರಾಯಪಟ್ಟಣ 78, ಹಾಸನ 559, ಹೊಳೆನರಸೀಪುರ 55, ಸಕಲೇಶಪುರ
139, ಇತೆರೆ ಜಿಲ್ಲೆಯ 6 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.