ADVERTISEMENT

ಲಸಿಕಾ ಮೇಳ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 12:41 IST
Last Updated 16 ಸೆಪ್ಟೆಂಬರ್ 2021, 12:41 IST
ಹಾಸನದಲ್ಲಿ ಗುರುವಾರ ಕೋವಿಡ್‌ ಲಸಿಕಾ ಮೇಳದ ಪ್ರಚಾರ ವಾಹನಗಳಿಗೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಚಾಲನೆ ನೀಡಿದರು. ವಾರ್ತಾಧಿಕಾರಿ ವಿನೋದ್ ಚಂದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಮೋಹನ್‌ ಕುಮಾರ್‌, ಬಿ.ಎ.ಪರಮೇಶ್‌ ಇದ್ದರು.
ಹಾಸನದಲ್ಲಿ ಗುರುವಾರ ಕೋವಿಡ್‌ ಲಸಿಕಾ ಮೇಳದ ಪ್ರಚಾರ ವಾಹನಗಳಿಗೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಚಾಲನೆ ನೀಡಿದರು. ವಾರ್ತಾಧಿಕಾರಿ ವಿನೋದ್ ಚಂದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಮೋಹನ್‌ ಕುಮಾರ್‌, ಬಿ.ಎ.ಪರಮೇಶ್‌ ಇದ್ದರು.   

ಹಾಸನ: ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಸೆ.17 ರಂದು ನಡೆಯುವ ಬೃಹತ್ ಕೋವಿಡ್‌ ಲಸಿಕಾ ಮೇಳದ ಬಗ್ಗೆ ಜಾಗೃತಿ
ಮೂಡಿಸುವ ಸಲುವಾಗಿ ಆಯೋಜಿಸಿದ್ದ ವಿಶೇಷ ಪ್ರಚಾರ ವಾಹನಗಳಿಗೆ ಗುರುವಾರಚಾಲನೆ ನೀಡಲಾಯಿತು.

ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಗಿರೀಶ್, ಹಾಸನ ಒಳಗೊಂಡಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಸರ್ಕಾರ ನಿರ್ದೇಶನ ನೀಡಿದ್ದು, ಜಿಲ್ಲೆಯಲ್ಲಿ ಸುಮಾರು 80 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈಗಾಗಲೇ 900ಕ್ಕೂ ಅಧಿಕ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ಹಾಸನದಲ್ಲಿ ಹತ್ತು ಪ್ರಚಾರ ವಾಹನಗಳು ನಗರದಲ್ಲಿ ಸಂಚರಿಸಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಲಸಿಕಾ ಮೇಳ ಬೆಳಿಗ್ಗೆ 8 ರಿಂದ ಸಂಜೆ 7 ರ ವರೆಗೆನಡೆಯಲಿದ್ದು, ಜನರು ತಪ್ಪದೇ ಸಮೀಪದ ಪ್ರಾಥಮಿಕ
ಆರೋಗ್ಯ ಕೇಂದ್ರಗಳಿಗೆ ತೆರಳಿ, ಅಂತರ ಕಾಯ್ದುಕೊಂಡು ಲಸಿಕೆ ಪಡೆಯುವಂತೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್ ಮಾತನಾಡಿ, ಲಸಿಕೆ ಪಡೆಯಲು ಇದು ಒಳ್ಳೆಯ ಅವಕಾಶವಾಗಿದ್ದು, 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ವಿನಂತಿಸಿದರು.
ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್ ಮಾತನಾಡಿ, ಲಸಿಕೆ ಪಡೆದು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.