ADVERTISEMENT

ಹಾವೇರಿ: ಒಂದೇ ದಿನ 920 ಜನ ಗುಣಮುಖ

150 ಜನರಿಗೆ ಸೋಂಕು, ಹಾಸನದ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 13:00 IST
Last Updated 19 ಸೆಪ್ಟೆಂಬರ್ 2020, 13:00 IST

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13 ಸಾವಿರ ಗಡಿ ದಾಟಿದೆ. ಶನಿವಾರ ಹೊಸದಾಗಿ 150 ಸೋಂಕು ಪ್ರಕರಣಗಳು ವರದಿಯಾಗಿದೆ.

ಗುಣಮುಖರಾಗುವವರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ ದಿನ 920 ಜನ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ವರೆಗೆ 10,314 ಜನ ಗುಣಮುಖರಾಗಿದ್ದಾರೆ.

ಇಬ್ಬರು ಸಾವಿನೊಂದಿಗೆ ಈವರೆಗೆ ಸೋಂಕಿಗೆ 260 ಜನರು ಮೃತಪಟ್ಟಿದ್ದಾರೆ. ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಸನ ತಾಲ್ಲೂಕಿನ 61 ವರ್ಷ ಹಾಗೂ 31 ವರ್ಷದ ಪುರುಷರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಕೋವಿಡ್‌ ನಿಯಮ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ADVERTISEMENT

ಸೋಂಕಿತರ ಸಂಖ್ಯೆ 13,208ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2634. ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಮತ್ತು ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 55 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಅರಸೀಕೆರೆ 4, ಚನ್ನರಾಯಪಟ್ಟಣ 25, ಆಲೂರು 3, ಹಾಸನ 61, ಹೊಳೆನರಸೀಪುರ 12, ಅರಕಲಗೂಡು 32, ಬೇಲೂರು 7, ಸಕಲೇಶಪುರ 5 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಆರೋಗ್ಯ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿದ ವೇಳೆ ಕೋವಿಡ್‌ ಲಕ್ಷಣಗಳು ಇದ್ದರೆ ಅವರ ಗಮನಕ್ಕೆ ತರಬೇಕು. ಗಂಟಲು ಹಾಗೂ ಮೂಗಿನ ದ್ರವದ ಮಾದರಿಯನ್ನು ಪರೀಕ್ಷೆ ಮಾಡಿಸಬೇಕು. ಅಂತರ ಪಾಲನೆ ಮಾಡಬೇಕು ಮತ್ತು ಮಾಸ್ಕ್‌ ಧರಿಸಿ ಓಡಾಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.