ಅರಕಲಗೂಡು: ಪಟ್ಟಣದಲ್ಲಿ ಬುಧವಾರ ತಿರಂಗಾ ಯಾತ್ರೆ ಸಂಭ್ರಮದಿಂದ ಜರುಗಿತು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ಸಿನ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಪಟ್ಟಣದ ಕೋಟೆ ಕೊತ್ತಲು ಗಣಪತಿ ರಸ್ತೆ ಮುಂಭಾಗದಿಂದ ಹೊರಟ ಯಾತ್ರೆಗೆ ತಹಶೀಲ್ದಾರ್ ಕೆ.ಸಿ. ಸೌಮ್ಯ, ಗ್ರೇಡ್–2 ತಹಶೀಲ್ದಾರ್ ಸಿ. ಸ್ವಾಮಿ ಚಾಲನೆ ನೀಡಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಯಾತ್ರೆ ಸಂತೆಮರೂರು ವೃತ್ತದಿಂದ ಹೆಂಟಗೆರೆ ರಸ್ತೆಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ವರೆಗೆ ಸಾಗಿತು. ಯಾತ್ರೆಯಲ್ಲಿ ಭಾಗವಹಿಸಿದ್ದ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ದೇಶಪ್ರೇಮ ಮೆರೆದರು. ಭಾರತ್ ಮಾತಾಕೀ ಜೈ ಘೋಷಣೆ ಕೂಗಿ ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.