ADVERTISEMENT

ಹಾಸನ: ಬೈಕ್‌ಗೆ ಲಾರಿ ಡಿಕ್ಕಿ, ತಾಯಿ -ಮಗು ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 5:35 IST
Last Updated 8 ಜುಲೈ 2022, 5:35 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಬೈಕ್
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಬೈಕ್    

ಹಾಸನ: ನಗರದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಿಗ್ಗೆ ಎಲೆಕ್ಟ್ರಿಕ್ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಯಿ ಸೀಮಾ(35) ಮಯೂರ (12) ಮೃತಪಟ್ಟವರು. ಸೀಮಾ ಅವರ ಪತಿ ಬಿಹಾರದಲ್ಲಿ ಸೈನಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಗುವನ್ನು ಶಾಲೆಗೆ ಬಿಡಲು ಹೋಗುವಾಗ ಅಪಘಾತ ನಡೆದಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.