ADVERTISEMENT

ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ; ದಂಡ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 4:29 IST
Last Updated 9 ಆಗಸ್ಟ್ 2021, 4:29 IST

ಹೊಳೆನರಸೀಪುರ: ಪಟ್ಟಣದ ರಿವರ್‌ ಬ್ಯಾಂಕ್‌ ರಸ್ತೆಯ ಶಾದಿ ಮಹಲ್‌ನಲ್ಲಿ ಶನಿವಾರ 300ಕ್ಕೂ ಅಧಿಕ ಜನರು ಸೇರಿದ್ದ ಮದುವೆ ಕಾರ್ಯಕ್ರಮದ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ, ದಂಡ ವಿಧಿಸಿದ್ದಾರೆ.

‘ಮಾಸ್ಕ್‌ ಧರಿಸದೆ, ಅಂತರ ಕಾಯ್ದುಕೊಳ್ಳದೆ ಕೋವಿಡ್‌ ನಿಯಮ ಉಲ್ಲಂಘಿಸಿದ್ದಾರೆ. ಶಾದಿಮಹಲ್‌ನ ವ್ಯವಸ್ಥಾಪಕರಿಗೆ ನೋಟಿಸ್‌ ನೀಡಿ, ಮಧುವಿನ ತಂದೆಗೆ ₹ 10 ಸಾವಿರ ದಂಡ ವಿಧಿಸಲಾಗಿದೆ’ ಎಂದು ತಹಶೀಲ್ದಾರ್‌ ಕೃಷ್ಣಮೂರ್ತಿ ತಿಳಿಸಿದ್ದಾರೆ.

‘ಪಟ್ಟಣದಲ್ಲಿ ಯಾರ ಮನೆಯಲ್ಲಾಗಲಿ, ಛತ್ರದಲ್ಲಾಗಲಿ ಮದುವೆ ಮಾಡಲು ಅನುಮತಿ ಪಡೆದುಕೊಳ್ಳಲೇಬೇಕು. ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೂರಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.