ಹಾಸನ: ಸಕಲೇಶಪುರ ತಾಲ್ಲೂಕಿನ ಚಂಗಡಿಹಳ್ಳಿ ಗ್ರಾಮ ಲೆಕ್ಕಿಗ ಹರಿ ಪ್ರಸಾದ್ ಅವರು ಬಗರ್ ಹುಕುಂ ಸಾಗುವಳಿ ಚೀಟಿ ನೀಡಲು ಪರಿಶೀಲನಾ ವರದಿಗಾಗಿ ವ್ಯಕ್ತಿಯಿಂದ ಬುಧವಾರ ಲಂಚಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ದಾಳಿ ನಡೆಸಿದ್ದಾರೆ.
ಪರಿಶೀಲನಾ ವರದಿ ನೀಡಲು ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮದ ದರ್ಶನ್ ಅವರಿಗೆ ₹20ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. ಪೂರ್ತಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ಡಿವೈಎಸ್‌ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಶಿಲ್ಪಾ, ವೀಣಾ ಮತ್ತು ಸಿಬ್ಬಂದಿ ದಾಳಿನಡೆಸಿದ್ದರು. ಗ್ರಾಮ ಲೆಕ್ಕಿಗನನ್ನು ಬಂಧಿಸಿ, ಹಣ ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.