ADVERTISEMENT

ಕಾನೂನು, ಸುವ್ಯವಸ್ಥೆಗೆ ಧಕ್ಕೆಯಾದರೆ ಕ್ರಮ: ಪೊಲೀಸ್‌ ವರಿಷ್ಠಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 7:42 IST
Last Updated 28 ಸೆಪ್ಟೆಂಬರ್ 2020, 7:42 IST
ಆರ್‌.ಶ್ರೀನಿವಾಸ್‌ಗೌಡ
ಆರ್‌.ಶ್ರೀನಿವಾಸ್‌ಗೌಡ   

ಹಾಸನ: ವಿವಿಧ ಸಂಘಟನೆಗಳು ಕರೆ ನೀಡಿರುವ ಸೆ. 28ರ ಕರ್ನಾಟಕ ಬಂದ್ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ ಗೌಡ ಎಚ್ಚರಿಸಿದ್ದಾರೆ.‌

‘ಪ್ರತಿಭಟನಾಕಾರರು ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರ ವ್ಯವಸ್ಥೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪ್ರತಿಭಟನೆ ನಡೆಯುವ ಸಮಯದಲ್ಲಿ ಯಾವುದೇ ರೀತಿಯ ಗಲಭೆ, ಗಲಾಟೆ ಸಾರ್ವಜನಿಕರ ಆಸ್ತಿ ನಷ್ಟ ಇತರೆ ಅಹಿತಕರ ಘಟನೆಗಳು ನಡೆದಲ್ಲಿ ಹಾಗೂ ಟೈರ್‌ಗಳಿಗೆ ಬೆಂಕಿ ಹಚ್ಚುವುದು, ಕೆಎಸ್‍ಆರ್‌ಟಿಸಿ ಬಸ್‍ಗೆ ಕಲ್ಲು ತೂರುವುದು ಮತ್ತು ಬಲವಂತವಾಗಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುವಂತೆ ಒತ್ತಾಯ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

ಕೋವಿಡ್‌ ತಡೆಗಟ್ಟುವ ಸಲುವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಪ್ರತಿಭಟನಾಕಾರರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಶಾಂತ ರೀತಿಯಿಂದ ಪ್ರತಿಭಟನೆ ನಡೆಸುವಂತೆ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.