ADVERTISEMENT

ಸವಾಲು ಮೆಟ್ಟಿನಿಂತು ಮುನ್ನಡೆಯಿರಿ: ಆರ್‌.ಗಿರೀಶ್ ಸಲಹೆ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಹೆಣ್ಣುಮಕ್ಕಳಿಗೆ ಜಿಲ್ಲಾಧಿಕಾರಿ ಆರ್‌.ಗಿರೀಶ್ ಸಲಹೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2022, 15:36 IST
Last Updated 11 ಮಾರ್ಚ್ 2022, 15:36 IST
ಹಾಸನ ಜಿಲ್ಲಾ ಪಂಚಾಯಿತಿ ಬಳಿ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಸಿಇಒ ಕಾಂತರಾಜ್‌ ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳು ಹೆಜ್ಜೆ ಹಾಕಿದರು
ಹಾಸನ ಜಿಲ್ಲಾ ಪಂಚಾಯಿತಿ ಬಳಿ ಮೆರವಣಿಗೆಗೆ ಚಾಲನೆ ನೀಡಿದ ಬಳಿಕ ಸಿಇಒ ಕಾಂತರಾಜ್‌ ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳು ಹೆಜ್ಜೆ ಹಾಕಿದರು   

ಹಾಸನ: ಮಹಿಳೆಯರು ಜೀವನದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತುಮುನ್ನಡೆಯಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಹಾಗೂ ನಗರ ಜೀವನೋಪಾಯಅಭಿಯಾನ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸಭೆ, ಸ್ತ್ರೀಶಕ್ತಿ ಒಕ್ಕೂಟ ಹಾಗೂ ವಿವಿಧ ಮಹಿಳಾ ಸಂಘಗಳ ಆಶ್ರಯದಲ್ಲಿ ಶುಕ್ರವಾರಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾದಿನಾಚರಣೆ, ವಸ್ತು ಪ್ರದರ್ಶನ, ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.

‘ದೇಶದ ಪ್ರಗತಿಯಲ್ಲಿ ಮಹಿಳೆಯರದ್ದು ಸಮಪಾಲಿದೆ. ಸ್ವಾತಂತ್ರ್ಯಸಂಗ್ರಾಮದಿಂದಲೂ ಎಲ್ಲಾ ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ದೇಶಕಟ್ಟುವ ಸೇವೆಯಲ್ಲಿ ಅವರ ಪಾತ್ರ ಶ್ಲಾಘನೀಯ. ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಅನೇಕ ಸಮಸ್ಯೆ ಎದುರಿಸುತ್ತಿದ್ದು, ಅವುಗಳನ್ನು ಮೆಟ್ಟಿನಿಂತುಮುನ್ನಡೆಯಬೇಕು’ ಎಂದು ಆತ್ಮಸ್ಥೈರ್ಯ ತುಂಬಿದರು.

ADVERTISEMENT

ಪೊಲೀಸ್‌ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಮಾತನಾಡಿ, ‘ಕಟ್ಟಕಡೆಯಮಹಿಳೆಗೂ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕವಾಗಿ ಸಮಾನತೆ ದೊರೆತಾಗಲೇ ಈ ಆಚರಣೆಗೆ ಒಂದು ಅರ್ಥ ದೊರೆಯುತ್ತದೆ’ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ರವಿಕಾಂತ್‍ ಅವರು ‘ಮಹಿಳೆಯರಿಗೆಸಂಬಂಧಿಸಿದ ಕಾನೂನುಗಳ ಬಗ್ಗೆ ಅರಿವು’ ಕುರಿತು, ಡಾ. ಧರ್ಮಕುಮಾರ್ಕೆ.ಜಿ ಅವರು ‘ಮಹಿಳೆಯರಿಗೆ ಸಂಬಂಧಿಸಿದ ಕ್ಯಾನ್ಸರ್ ಬಗ್ಗೆ ಅರಿವು’ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜು,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ, ಜಿಲ್ಲಾ ಪಂಚಾಯಿತಿಉಪ ಕಾರ್ಯದರ್ಶಿ ಚಂದ್ರಶೇಖರ್, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ರೇವತಿ ಸುಧಾಕರ್, ಸುಧಾ ಬರಗೂರು, ನಗರಸಭೆ ಆಯುಕ್ತ ಪರಮೇಶ್ವರಪ್ಪ, ಉಪಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಜಿಲ್ಲಾ ಆಯುಷ್‌ ವೈದ್ಯಾಧಿಕಾರಿಡಾ.ಎ.ವೀಣಾಲತಾ, ಸಹಾಯಕ ನಿರ್ದೇಶಕ ಸಿ.ಕೆ.ಹರೀಶ್‌ ಹಾಜರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪಂಚಾಯಿತಿ ಬಳಿ ಮೆರವಣಿಗೆಗೆ ಸಿಇಒಕಾಂತರಾಜ್, ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಚಾಲನೆ ನೀಡಿದರು. ಡೊಳ್ಳು ಕುಣಿತಕ್ಕೆ ಸಿಇಒ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹೆಜ್ಜೆ ಹಾಕುತ್ತಿದ್ದಂತೆ ನೆರೆದಿದ್ದ ಮಹಿಳೆಯರೂ ಕುಣಿದು ಸಂತೋಷ ವ್ಯಕ್ತಪಡಿಸಿದರು.

ಇದೇ ವೇಳೆ ಅಂಬೇಡ್ಕರ್‌ ಭವನದ ಆವರಣದಲ್ಲಿ ಮಹಿಳಾ ಸಂಘಗಳು ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.